ನಾಗಿರೆಡ್ಡಿ ಗ್ರಾಮದ ಬಳಿ ತ್ವರಿತವಾಗಿ ಗೋಶಾಲೆ ಆರಂಭಿಸಿ: ಜಿಲ್ಲಾಧಿಕಾರಿ ಆರ್ ಲತಾ

Source: SO News | By Laxmi Tanaya | Published on 22nd September 2021, 9:15 PM | State News | Don't Miss |

ಚಿಕ್ಕಬಳ್ಳಾಪುರ : ಸರ್ಕಾರಿ ಗೋಶಾಲೆ  ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆಯಾಗಿರುವ ಜಿಲ್ಲೆಯ ನಾಗಿರೆಡ್ಡಿ ಗ್ರಾಮದ ಬಳಿ ಪ್ರಸ್ತುತ ಕನಿಷ್ಠ 100 ಗೋವುಗಳನ್ನು ಪಾಲನೆ, ಪೋಷಣೆ ಹಾಗೂ ಸಂರಕ್ಷಣೆ ಮಾಡಲು ಅಗತ್ಯವಾಗಿ ಬೇಕಾಗಿರುವ ಎಲ್ಲಾ ಸೌಕರ್ಯಗಳನ್ನ ತುರ್ತಾಗಿ ಕಲ್ಪಿಸಿ ಗೋಶಾಲೆಯನ್ನು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

 ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೂತನ ಸರ್ಕಾರಿ ಗೋಶಾಲೆ ಆರಂಭಿಸುವ ಕುರಿತ ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಕರ್ನಾಟಕ ಜಾನುವಾರು ಹತ್ಯ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020ರ ಅನ್ವಯ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 1 ಗೋಶಾಲೆಯನ್ನು ಸ್ಥಾಪಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಗೋಶಾಲೆ ಸ್ಥಾಪಿಸಲು ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ನಾಗಿರೆಡ್ಡಿಹಳ್ಳಿ ಗ್ರಾಮ ವ್ಯಾಪ್ತಿಯ ಸರ್ವೆ ನಂ : 41 ರಲ್ಲಿ 10 ಎಕರೆ ಜಮೀನನ್ನು ಜಿಲ್ಲಾಡಳಿತ ಮಂಜೂರು ಮಾಡಿದ್ದು, ಸದರಿ ಗೋಶಾಲೆ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಅವರು ಕಳೆದ ಆಗಸ್ಟ್ 28 ರಂದು ಶಂಕುಸ್ಥಾಪನೆ ನೆರವೇರಿಸಿರುತ್ತಾರೆ. ಈ ಗೋಶಾಲೆಗೆ ನಿಗದಿಯಾಗಿರುವ ಜಮೀನಿನಲ್ಲಿ ಮಾದರಿ ಗೋಶಾಲೆ ನಿರ್ಮಾಣ ಮಾಡಲಿಕ್ಕೆ ರೂಪುರೇಷೆಗಳನ್ನು ಸಿದ್ದಪಡಿಸಿಕೊಂಡು ತುರ್ತಾಗಿ ನೂರು ಗೋವುಗಳನ್ನು ಪಾಲನೆ, ಪೋಷಣೆ ಹಾಗೂ ಸಂರಕ್ಷಣೆ ಮಾಡಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಿ ತ್ವರಿತವಾಗಿ ಗೋಶಾಲೆಯನ್ನು ಆರಂಭಿಸಲು ಜಿಲ್ಲಾಧಿಕಾರಿಗಳು ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

 ಗೋ ಶಾಲೆ ಸ್ಥಾಪಿಸಲು 50 ಲಕ್ಷಗಳ ಅನುದಾನ ನಿಗದಿಯಾಗಿದ್ದು, ಸರ್ಕಾರಿ ಗೋಶಾಲೆ ಪೂರ್ಣ ಕಾಲಿಕವಾಗಿ ಅಭಿವೃದ್ಧಿಗೊಂಡು ಚಾಲನೆಗೊಳ್ಳುವವರೆಗೆ ತಾತ್ಕಾಲಿಕ ಗೋಶಾಲೆಯನ್ನು ಈಗಾಗಲೇ ನಿಗದಿಯಾಗಿರುವ ಜಾಗದಲ್ಲಿಯೇ ಆರಂಭಿಸಬೇಕು. ಆ ಜಾಗದಲ್ಲಿ ಸಮರ್ಪಕ ಯೋಜನೆ ರೂಪಿಸಿ ಪ್ರಸ್ತುತ 100 ಗೋವುಗಳ ಪಾಲನೆಗೆ ಅಗತ್ಯವಾಗಿ ಬೇಕಾಗಿರುವ ಶೆಡ್ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಪೆನ್ಸಿಂಗ್, ಮೇವು ಪೂರೈಕೆ, ವಿದ್ಯುತ್ ಸಂಪರ್ಕ, ಪಾಲನೆ ಪೋಷಣೆ, ಸಂರಕ್ಷಣೆ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸಲು ಇಂದಿನಿಂದಲೇ ಅಗತ್ಯ ಕ್ರಮ ಕೈಗೊಂಡು ತ್ವರಿತವಾಗಿ ಗೋಶಾಲೆಯನ್ನು ಆರಂಭಿಸಬೇಕು. ಈ ಉದ್ದೇಶಕ್ಕಾಗಿ ಪ್ರಸ್ತುತ ಬಿಡುಗಡೆಯಾಗಿರುವ 24 ಲಕ್ಷಗಳ ಅನುದಾನವನ್ನು ಬಳಸಿಕೊಳ್ಳುವುದು ಇದಲ್ಲದೇ ಗೋಶಾಲೆ ನಿರ್ಮಾಣಕ್ಕೆ ಉಪಯೋಗಿಸಿಕೊಳ್ಳಲು ಮನ್ರೇಗಾ ಯೋಜನೆಯಡಿ ಅವಕಾಶವಿರುವ ಅನುದಾನವನ್ನು ಸಹ ಬಳಸಿಕೊಳ್ಳಲು ಸೂಚಿಸಿದರು.

  ಜಿಲ್ಲೆಯಲ್ಲಿರುವ ರೋಗ ಗ್ರಸ್ಥ, ಅನುತ್ಪಾದಕ, ಪ್ರಕೃತಿ ವಿಕೋಪಗಳಿಂದ ಅಂಗವಿಕಲತೆಗೆ ಒಳಗೊಂಡ ಹಾಗೂ ಬಿಡಾಡಿ ಜಾನುವಾರುಗಳನ್ನು ಈ ಗೋಶಾಲೆಯಲ್ಲಿ ಪುನರ್ವಸತಿ ಕಲ್ಪಿಸಿ ಸಂರಕ್ಷಿಸಬೇಕಾಗಿದೆ. ಅಂತಹ ಜಾನುವಾರುಗಳನ್ನು ಪೋಷಣೆ ಮಾಡಲಾಗದ ರಾಸುಗಳ ಮಾಲೀಕರು ಗೋಶಾಲೆ ಆರಂಭವಾದ ಮೇಲೆ ಅಂತಹ ಜಾನುವಾರುಗಳನ್ನು ಪಶು ಸಂಗೋಪನೆ ಇಲಾಖೆಯನ್ನು ಸಂಪರ್ಕಿಸಿ ಪುನರ್ವಸತಿಗಾಗಿ ಬಿಡಬಹುದಾಗಿದೆ. ಈ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ಹಾಗೂ ರೇಷ್ಮೆ ಇಲಾಖೆಗಳ ಸಮನ್ವಯತೆಯೊಂದಿಗೆ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರದೊಂದಿಗೆ ಗೋಶಾಲೆಯನ್ನು ತ್ವರಿತವಾಗಿ ಪ್ರಾರಂಭಿಸಲು ಏನೆಲ್ಲ ಸೌಕರ್ಯಗಳನ್ನು ಕಲ್ಪಿಸಬೇಕೋ ಆ ಎಲ್ಲಾ ಅಗತ್ಯ ಕ್ರಮಕೈಗೊಳ್ಳಲು ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಜನಾರ್ಧನ್, ಲಯನ್ಸ್ ಕ್ಲಬ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಡಾ.ಪಿ.ಎಂ.ರವಿ ನಾಯ್ಡು, ಜಿಲ್ಲಾ ಪ್ರಾಣಿ ದಯಾಸಂಘದ ಸದಸ್ಯರಾದ ಪೃಥ್ವಿರಾಜ್, ರಾಧ ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳು/ ಸಿಬ್ಬಂದಿ ಹಾಜರಿದ್ದರು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...