ಪತ್ರಕರ್ತರ ರಾಜ್ಯಸಮ್ಮೇಳನ; ಉ.ಕ.ಜಿಲ್ಲಾ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ

Source: sonews | By Staff Correspondent | Published on 28th February 2020, 6:14 PM | Coastal News |

ಭಟ್ಕಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಯಾದ ಮಂಗಳೂರಿನ ಪುರಭವನದಲ್ಲಿ ಮಾ.7 ಹಾಗೂ 8ರಂದು ನಡೆಯುತ್ತಿದ್ದು ಜಿಲ್ಲೆಯ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉ.ಕ.ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಪ್ರಕಟಣೆಯಲ್ಲಿ ಕೋರಿದ್ದಾರೆ. 

ಈಗಾಗಲೇ ಸಮ್ಮೇಳನದ ಸಿದ್ಧತೆ ನಡೆದಿದ್ದು ಉತ್ತರ ಕನ್ನಡ ಜಿಲ್ಲೆಯಿಂದ ಭಾಗವಹಿಸುವ ಪತ್ರಕರ್ತರಿಗೆ ವಸತಿ ವ್ಯವಸ್ಥೆ ಮಾಡುವರೇ ಮೊದಲೇ ತಿಳಿಸಬೇಕಾಗಿದ್ದು ಜಿಲ್ಲೆಯ ಎಲ್ಲಾ ತಾಲೂಕಿನ ಸಂಘದ ಸದಸ್ಯ ಪತ್ರಕರ್ತರು ಮಾ.1ರ ಒಳಗಾಗಿ ಭಾಗವಹಿಸುವವರ ವಿವರಗಳನ್ನು ವಾಟ್ಸಅಪ್ ಮೂಲಕ ತಿಳಿಸುವರೇ ಕೋರಿದ್ದಾರೆ. 

ಮಂಗಳೂರಿನಲ್ಲಿ ನಡೆಯಲಿರುವ ಸಮ್ಮೇಳನವನ್ನು ಮಾ.7ರಂದು ಬೆಳಿಗ್ಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಾನಿಧ್ಯ ವಹಿಸುವರು. ಉಪ ಮುಖ್ಯ ಮಂತ್ರಿ ಡಾ. ಸಿ. ಅಶ್ವತ್ಥನಾರಾಯಣ ಸ್ಮರಣ ಸಂಚಿಕೆ ಬಿಡುಗಡೆಗೊಳಿಸವರು. ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಅವರು ವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸುವರು. ಬಂದರು, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೋಟೋ ಪ್ರದರ್ಶನ ಉದ್ಘಾಟಿಸುವರು. ಸಂಸದ ನಳಿನ್ ಕುಮಾರ್ ಕಟೀಲ್ ವಸ್ತು ಪ್ರದರ್ಶನ ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ವಹಿಸುವರು. ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಪೈ ಅವರು ಆಶಯ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ ನಾಯಕ ಯು., ಯು.ಟಿ.ಖಾದರ್ ಉಪಸ್ಥಿತರಿರುವರು. 

 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...