ಚುನಾವಣಾ ಪೂರ್ವಸಿದ್ಧತೆ ಕುರಿತು ರಾಜ್ಯ ಮಟ್ಟದ ಸಭೆ ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

Source: SOnews | By Staff Correspondent | Published on 1st February 2023, 5:51 PM | State News |

ಬೆಂಗಳೂರು:ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ/ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿಂದ, ಈ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಕಾನೂನು/ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ವಿವಿಧ ಇಲಾಖೆಗಳ  ಅಧಿಕಾರಿಗಳಿಗೆ ಸೂಚಿಸಿದರು.

ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ದತೆಯ ಕುರಿತು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಸದರಿ ಸಭೆಯಲ್ಲಿ  ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಕುರಿತು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.

ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ  ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರ ರಾಜ್ಯ ಚೆಕ್ ಪೆÇೀಸ್ಟ್‍ಗಳನ್ನು ತೆರೆಯಲು ಸೂಚಿಸಿದರು.

ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆÉ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು.
ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು.

ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು, ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು.

ಸಮಾಜಘಾತುಕ ಭಾಷಣ/ ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ನಿಗಾವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ದಿನಾಂಕ: 24.11.2022 ರಂದು ರಾಜ್ಯ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ತೆಗೆದುಕೊಂಡಿರುವ ಕ್ರಮ ಮತ್ತು ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ರವರು, ಆಯುಕ್ತರು ಅಬಕಾರಿ ಇಲಾಖೆ, ಆಯುಕ್ತರು ವಾಣಿಜ್ಯ ತೆರಿಗೆ, ರಾಜ್ಯ ಸರಕು ಮತ್ತು ಸೇವೆ ಇಲಾಖೆ, ಹೆಚ್ಚುವರಿ ನಿರ್ದೇಶಕರು(ತನಿಖೆ), ಆದಾಯ ತೆರಿಗೆ ಇಲಾಖೆ, ಉಪ ಆಯುಕ್ತರು, ಕೇಂದ್ರ ತೆರಿಗೆ ಮತ್ತು ಸುಂಕ ಇಲಾಖೆ, ಹೆಚ್ಚುವರಿ ನಿರ್ದೇಶಕರು, ರೆವಿನ್ಯೂ ಇಂಟಲಿಜೆನ್ಸ್, ಉಪ ನಿರ್ದೇಶಕರು, ಜಾರಿ ನಿರ್ದೇಶನಾಲಯ, ಬೆಂಗಳೂರು ವಲಯ, ವಲಯ ನಿರ್ದೇಶಕರು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಡೆಪ್ಯೂಟಿ ಇನ್ಸ್‍ಪೆಕ್ಟರ್ ಜನರಲ್, ಸಿಐಎಸ್‍ಎಫ್, ಸಹಾಯಕ ಭದ್ರತಾ ಆಯುಕ್ತರು, ರೈಲ್ವೆ ಪೆÇ್ರೀಟೆಕ್ಷನ್ ಪೆÇೀರ್ಸ್, ಜನರಲ್ ಮ್ಯಾನೇಜರ್, ಆರ್‍ಬಿಐ, ಡಿಜಿಎಂ, ಎಸ್‍ಎಲ್‍ಬಿಸಿ, ಜನರಲ್ ಮ್ಯಾನೇಜರ್, ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ನಿರ್ದೇಶಕರು, ಅಂಚೆ ಸೇವೆಗಳು, ಕರ್ನಾಟಕ ವೃತ್ತ ಇವರುಗಳು ಹಾಜರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...