ಮೈ ಶುಗರ್ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ

Source: so news | Published on 8th September 2019, 11:50 PM | State News | Don't Miss |

ಮಂಡ್ಯ: ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. 
ಮೈ ಶುಗರ್ ಕಂಪನಿ ,ಮಂಡ್ಯ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು. 
ಮೈ ಶುಗರ್ ಕಾರ್ಖಾನೆಯ 330 ನೌಕರರು ಸ್ವಯಂ ನಿವೃತ್ತಿ ಹೊಂದಲು ಇಚ್ಛಿಸಿದ್ದು, 27 ಕೋಟಿ ರೂ. ವೆಚ್ಚದಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಲಾಗುವುದು. ರೈತರಿಗೆ ಹಾಗೂ ಕಾರ್ಖಾನೆಯ ನೌಕರರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ನೀಡುವುದು ಅಥವಾ ಕಾರ್ಯಾಚರಣೆ ಮತ್ತು ನಿರ್ವಹಣೆ ಮೇರೆಗೆ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 
ಕಬ್ಬು ನುರಿಯುವ ಸಾಮಥ್ರ್ಯ ಹೆಚ್ಚಳ, ವಿದ್ಯುತ್ ಉತ್ಪಾದನೆ ಸಾಮಥ್ರ್ಯ ವೃದ್ಧಿ, ಕಾರ್ಖಾನೆಗಳಲ್ಲಿ ಕೈಗೊಳ್ಳಬೇಕಾಗಿರುವ ದುರಸ್ತಿ ಕಾರ್ಯ ಗಳ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 
ಮಂಡ್ಯ ಸಂಸದೆ ಸುಮಲತಾ ಮತ್ತು ಶಾಸಕ ಸಿ.ಎಸ್.ಪುಟ್ಟರಾಜು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಎಂ. ವಿ. ವೆಂಕಟೇಶ್ ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...