ಪೂರ್ಣ ಪ್ರಮಾಣದ ತರಗತಿಗಳ ಆರಂಭಕ್ಕೆ ಕ್ರಮ : ಎಸ್.ಸುರೇಶ್‍ಕುಮಾರ್

Source: SO News | By Laxmi Tanaya | Published on 20th January 2021, 9:38 PM | State News | Don't Miss |

ಶಿವಮೊಗ್ಗ : ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್ಲಾ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದು, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಅವರು ಹೇಳಿದರು.

 ಅವರು ಬುಧವಾರ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ನಗರದಲ್ಲಿ ಸ್ಮಾರ್ಟ್‍ಸಿಟಿ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಅಭಿವೃದ್ಧಿಪಡಿಸಲಾದ ಶಾಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನಂತರ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಶಾಲಾಭಿವೃದ್ಧಿ ಸಮಿತಿಗಳೊಂದಿಗೆ ಏರ್ಪಡಿಸಲಾಗಿದ್ದ ಶಿಕ್ಷಣ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ಅಹವಾಲುಗಳನ್ನು ಆಲಿಸಿ ಮಾತನಾಡುತ್ತಿದ್ದರು.

 ಸ್ಥಳೀಯ ಸಚಿವರ ಆಸಕ್ತಿ ಹಾಗೂ ದಾನಿಗಳ ನೆರವಿನಿಂದಾಗಿ ನಗರದ ಶಾಲೆಗಳು ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ರೂಪುಗೊಂಡಿರುವುದು, ಯೋಗ ಶಿಕ್ಷಣ ನೀಡುತ್ತಿರುವುದು ರಾಜ್ಯಕ್ಕೆ ಮಾದರಿ ಎನಿಸಿದೆ. ಈ ಬೆಳವಣಿಗೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕಾಣುವಂತಾಗಬೇಕು. ಆಗ ಸಹಜವಾಗಿ ಸರ್ಕಾರಿ ಶಾಲೆಗಳ ವಾತಾವರಣ ಬದಲಾಗಲಿದೆ. ಬಡವರಿಗಾಗಿರುವ ಸರ್ಕಾರಿ ಶಾಲೆಗಳು ಉಳಿಯಬೇಕು ಎಂದ ಅವರು, ಪೋಷಕರಲ್ಲಿ ಖಾಸಗಿ ಶಾಲೆಗಳ ವ್ಯಾಮೋಹ ಹೆಚ್ಚಾಗಿದೆ. ಪೋಷಕರಿಗೆ ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸ ಬರಬೇಕು ಎಂದರು.

 ಅಲ್ಪ ಪ್ರಮಾಣದಲ್ಲಿ ಆರಂಭವಾಗಿರುವ ತರಗತಿಗಳಿಗೂ ಪೂರ್ಣ ಪ್ರಮಾಣದಲ್ಲಿ ಮಕ್ಕಳ ಹಾಜರಾತಿ ಇಲ್ಲ. ಕೆಲವು ಮಕ್ಕಳು ಬಾಲಕಾರ್ಮಿಕರಾಗಿ ಕೆಲವು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿಗಳು ಲಭ್ಯವಾಗಿವೆ. ಮಕ್ಕಳು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಸೂಚಿಸಿದ ಅವರು, ಇಂದಿನ ಸಂದಿಗ್ಧ ಸಂದರ್ಭದಲ್ಲಿ ಆನ್‍ಲೈನ್ ಶಿಕ್ಷಣ ನಿರಂತರ ಶಿಕ್ಷಣ ಚಟುವಟಿಕೆಗಳಿಗೆ ಪರ್ಯಾಯವಲ್ಲ ಎಂದ ಅವರು, ನಡೆಯುತ್ತಿರುವ ತರಗತಿಗಳಿಗೆ ಮಕ್ಕಳ ಹಾಜರಾತಿ ಸುಧಾರಿಸಿದೆ. ಜೊತೆಗೆ ನಿರೀಕ್ಷೆಯಂತೆ ವಿದ್ಯಾಗಮ ತರಗತಿಗಳೂ ನಡೆಯುತ್ತಿವೆ. ಈ ಅವಧಿಯಲ್ಲಿ ಶಿಕ್ಷಕರು ಮಕ್ಕಳಿಗೆ ದಿನಪತ್ರಿಕೆಗಳಲ್ಲಿ ಬರುವ ಪ್ರೇರಣಾತ್ಮಕ ವಿಷಯಗಳನ್ನು ತಿಳಿಸಬೇಕು. ಅಲ್ಲದೆ ಹೆಚ್ಚಿನ ಸಂಖ್ಯೆಯ ಮಕ್ಕಳಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲು ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

 ಪರೀಕ್ಷೆ ಎನ್ನುವುದು ಮಕ್ಕಳಿಗೆ ಶಿಕ್ಷೆ ಆಗದಿರಲಿ. ವಿದ್ಯಾರ್ಥಿಗಳಿಗೆ ಈಗಿರುವ ಸಮಯದ ಮಿತಿಯನ್ನು ಗಮನದಲ್ಲಿಟ್ಟುಕೊಂಡು ಪಠ್ಯಕ್ರಮ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ರಚನೆಗೆ ಸಂಬಂಧಿಸಿದಂತೆ ಇಲಾಖಾ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಕಳೆದ ಸಾಲಿನಲ್ಲಿ ಅನೇಕ ಸವಾಲುಗಳ ನಡುವೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ರಾಜ್ಯದ ಸುಮಾರು 8.50ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಲ್ಲಿ ಶಿಕ್ಷಕರು ಅನುಸರಿಸಿದ ಕ್ರಮವನ್ನು ಸಚಿವರು ಶ್ಲಾಘಿಸಿದರು.

 ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮಕ್ಕಳ ಶೈಕ್ಷಣಿಕ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಿ.ಇ.ಟಿ., ಜೆ.ಇ.ಇ., ಎನ್.ಇ.ಇ.ಟಿ. ಪರೀಕ್ಷೆಗೆ ಅಡ್ಡಿಯಾಗದಂತೆ ದಿನಾಂಕ ನಿಗಧಿಪಡಿಸಲಾಗಿದೆ. ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಲಿಯುತ್ತಾ ಕಲಿಯೋಣ ರೇಡಿಯೋ ಪಾಠ ಸರಣಿಯನ್ನು ಪ್ರಸಾರಗೊಳಿಸಲಾಗುತ್ತಿದ್ದು, ಜನಪ್ರಿಯತೆ ಪಡೆದಿದೆ ಎಂದರು.

 ಅತ್ಯಂತ ಶ್ರೇಷ್ಟ ಉತ್ಪಾದನಾ ಘಟಕ ಶಿಕ್ಷಣ ಇಲಾಖೆ. ಇಲ್ಲಿ ಮಾನಸಿಕ, ಬೌದ್ಧಿಕ ಬೆಳವಣಿಗೆಗಳ ಹಾಗೂ ಮೌಲ್ಯಗಳ ಉತ್ಪಾದನಾ ಘಟಕ ಎಂದು ಬಣ್ಣಿಸಿದ ಅವರು, ಶಿಕ್ಷಕ ಸ್ನೇಹಿ ವರ್ಗಾವಣಾ ನೀತಿಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಹಿಂದೆ ಕಡ್ಡಾಯ ವರ್ಗಾವಣೆಗೊಂಡವರಿಗೆ ವರ್ಗಾವಣೆಯಲ್ಲಿ ಆದ್ಯತೆ ನೀಡಲಾಗುವುದು. ಈಗಾಗಲೇ ಅರ್ಹರಾದ 1200ಉಪನ್ಯಾಸಕರಿಗೆ ನೇಮಕಾತಿ ಪತ್ರ ವಿತರಿಸಲಾಗಿದೆ ಎಂದರು.

 ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿಕ್ಷಕರು ಶೌಚಾಲಯ ರಹಿತ ಶಾಲೆಗಳ ಮಾಹಿತಿ ನೀಡಿದಲ್ಲಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಶೌಚಾಲಯ ಕಟ್ಟಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ಶಾಲೆಗಳು ಸರಿಯಾದ ರೂಪಕ್ಕೆ ಬರಲು ಶಿಕ್ಷಕರು ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ಮನವಿ ಮಾಡುವಂತೆ ಸೂಚಿಸಿದರು.

 ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ, ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುವರ್ಣ ಶಂಕರ್, ಉಪಮೇಯರ್ ಶ್ರೀಮತಿ ಸುರೇಖಾ ಮುರಳೀಧರ್, ಜಿ.ಪಂ.ಸದಸ್ಯೆ ಶ್ರೀಮತಿ ರೇಣುಕಾ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

* ಶಾಲಾ ಸಮಯವನ್ನು ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ನಿಗಧಿಗೊಳಿಸಿ ಆದೇಶ ಹೊರಡಿಸಿ. ಅತಿಥಿ ಶಿಕ್ಷಕರ ನೇಮಕಾತಿಗೆ ಅವಕಾಶ ನೀಡಿ.  - ಸಿದ್ಧಬಸಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ.

* ಅನುದಾನಿತ ಶಾಲೆಗಳ ಖಾಲಿ ಹುದ್ದೆಗಳ ಭರ್ತಿಗೆ ಅವಕಾಶ ಕೊಡಿ. ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರ ಬಡ್ತಿ ತಡೆಹಿಡಿಯುವ ಆದೇಶವನ್ನು ಹಿಂಪಡೆಯಿರಿ.  - ದಿವಾಕರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ.

* ಶಾಲೆಗಳಲ್ಲಿನ ಕಂಪ್ಯೂಟರ್ ಬಳಕೆಗೆ ಅನುಕೂಲವಾಗುವಂತೆ ಯು.ಪಿ.ಎಸ್. ಸೌಲಭ್ಯ ಕಲ್ಪಿಸಿ. ಬಿಸಿಯೂಟ ಮತ್ತು ಹಾಸ್ಟೆಲ್‍ಗಳನ್ನು ಆರಂಭಿಸಲು ಅನುಮತಿ ನೀಡಿ.  - ಪ್ರವೀಣ್, ಸೋನಲೆ,

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...