ಬೆಳಗಾವಿ: ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಬೆಂಗಾವಲು ವಾಹನದಮೇಲೆ ಚಪ್ಪಲಿ ಎಸೆತ, ಕಲ್ಲುತೂರಾಟ

Source: VB | By S O News | Published on 29th March 2021, 6:28 PM | State News | National News |

ಬೆಳಗಾವಿ: ಇಲ್ಲಿನ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಬಂದಿಳಿದಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌ಗೆ ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಸಿಕ್ಕರೆ, ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ, ಬೆಂಗಾವಲು ವಾಹನದ ಮೇಲೆ ಚಪ್ಪಲಿ, ಕಲ್ಲು ತೂರುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ರವಿವಾರಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ಕೋರಿದರು. ಈ ಮಧ್ಯೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ಅವರ ಬೆಂಗಾವಲು ವಾಹನಕ್ಕೆ ಚಪ್ಪಲಿ ತೂರಿ ಆಕ್ರೋಶ ವ್ಯಕ್ತಪಡಿಸಿದರು.

ಒಂದೆಡೆ ಸ್ವಾಗತ, ಮತ್ತೊಂದೆಡೆ ಪ್ರತಿಭಟನೆ ಹಿನ್ನೆಲೆಯಲ್ಲಿ ಇಲ್ಲಿನ ಸಾಂಬ್ರಾ ವಿಮಾನ

ಘಟನೆಯಲ್ಲಿ ವಾಹನದ ಗಾಜು ಪುಡಿಯಾಗಿದ್ದು, ಕೂಡಲೇ ದುಷ್ಕರ್ಮಿಗಳನ್ನು ಪೊಲೀಸರು ವಶಕ್ಕೆ  ಪಡೆದಿದ್ದಾರೆನ್ನಲಾಗಿದೆ.

ರಾಜಕಾರಣದಲ್ಲಿ ಜೈಕಾರ, ಹೂವಿನಹಾರ, ಧಿಕ್ಕಾರ, ಮೊಟ್ಟೆ, ಕಲ್ಲುಎಸೆತ ಎಲ್ಲವೂ ಸರ್ವೇಸಾಮಾನ್ಯ. ನಾನು ಬರುವಾಗ ಏನಾಯಿತು? ಎಂದು ನನಗೆ ಗೊತ್ತಿಲ್ಲ. ನಾನು ಇದನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತೇನೆ. ಎಲ್ಲ ಘಟನೆಗಳನ್ನು ಬೆಳಗಾವಿ ಜನರು ನೋಡುತ್ತಿದ್ದಾರೆ. ನಾವು ಚುನಾವಣೆ ಮಾಡಲು ಇಲ್ಲಿಗೆ ಬಂದಿದ್ದೇವೆ. ಶಾಂತ ರೀತಿಯಿಂದ ಚುನಾವಣೆ ಮಾಡಿ ಹೋಗುತ್ತೇವೆ. ಬಿಜೆಪಿಯವರು ಇಂಥ ಮುತ್ತು-ರತ್ನಗಳನ್ನು ತಮ್ಮ ಬಳಿ ಇಟ್ಟುಕೊಳ್ಳಲಿ. ಅವರೇನೇ ಮಾಡಿದರೂ ನಮಗೆ ಅನುಕೂಲ.

ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ಸರಕಾರ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ, ಎಚ್ಚರ ಇರಲಿ. ಬಿಜೆಪಿ ಆಳ್ವಿಕೆಯಲ್ಲಿ ವಿಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ, ಸಾಮಾನ್ಯ ಜನರ ಪಾಡೇನು? ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದ ಸಿಡಿ ಪ್ರಕರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ “ಮೂಕನಾಟಕ'.

ಸಿದ್ದರಾಮಯ್ಯ, ವಿಪಕ್ಷ ನಾಯಕ

ನಿಲ್ದಾಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ಶಿವಕುಮಾರ್ ಬೆಂಬಲಿಗರು ನರೆದಿದ್ದರು. ಆದರೆ, ಈ ನಡುವೆ ಕೆಲ ಕಿಡಿಗೇಡಿಗಳು ಶಿವಕುಮಾರ್ ಕಾರಿಗೆ ಚಪ್ಪಲಿ ತೂರಿದ್ದು ಕಾಂಗ್ರೆಸಿಗರನ್ನು ಕೆರಳಿಸಿದೆ. ಎರಡೂ ಕಡೆಯವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸವನೇ ಪಡಬೇಕಾಯಿತು. ಇದೇ
ವೇಳೆ ಭದ್ರತೆಗಾಗಿ ದೊಡ್ಡಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ನನ್ನ ಸ್ವಾಗತಕ್ಕೆ ಅಭಿನಂದನೆ: 'ರಮೇಶ್ ಜಾರಕಿಹೊಳಿ ಬೆಂಬಲಿಗರು ನನ್ನನ್ನು ಬೆಳಗಾವಿ ಜಿಲ್ಲೆಗೆ ಸ್ವಾಗತ ಮಾಡುತ್ತಿದ್ದಾರೆ. ಅವರೆಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರು ನನ್ನನ್ನು ಸ್ವಾಗತ ಮಾಡುವ ಮೂಲಕ ನನಗೆ ಶಕ್ತಿ ತುಂಬುತ್ತಿದ್ದಾರೆ. ಏನು ಘನ ಕಾರ್ಯ ಮಾಡಿದ್ದಾರೆಂದು ಇವರು ಪ್ರತಿಭಟನೆ ಮಾಡುತ್ತಿದ್ದಾರೆ' ಎಂದು ಶಿವಕುಮಾರ್ ಇದೇ ವೇಳೆ ಲೇವಡಿ ಮಾಡಿದರು.

ಒಳ್ಳೆಯ ಅಭ್ಯರ್ಥಿ: ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ. ಈ ಚುನಾವಣೆ ಬರಬಾರದಿತ್ತು ಬಂದಿದೆ. ಉಪಚುನಾವಣೆಗೆ
ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಬ್ಬರೇ ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿನಿಂತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು. ಸತೀಶ್ ಜಾರಕಿಹೊಳಿ ಅವರು ಎಲ್ಲದಕ್ಕೂ ಹೊಂದಿಕೊಂಡು ಬಾಳುವ ಸೌಮ್ಯ, ಸಜ್ಜನ ಅಭ್ಯರ್ಥಿ. ರಾಜ್ಯದಲ್ಲಿ ಬಿಜೆಪಿಯ 25 ಮಂದಿ ಸಂಸದರಿದ್ದರೂ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳ ವಿರುದ್ದ ಜನತೆಯ ಪರವಾಗಿ  ಒಮ್ಮೆಯೂ ಧ್ವನಿ ಎತ್ತಲಿಲ್ಲ. ಅಲ್ಲದೆ, ಬಿಜೆಪಿ ನುಡಿದಂತೆ ನಡೆಯಲಿಲ್ಲ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕೊರೋನ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಬಿಜೆಪಿ ಸರಕಾರ ನಡೆದುಕೊಳ್ಳಲಿಲ್ಲ. ರಿಕ್ಷಾ ಚಾಲಕರು, ಮಡಿವಾಳರು, ನೇಕಾರರು ಸೇರಿದಂತೆ ಯಾರೊಬ್ಬರಿಗೂ ಬಿಡಿಗಾಸು ನೆರವು ನೀಡಲಿಲ್ಲ. 15 ಲಕ್ಷ ರೂ. ಪ್ರತಿಯೊಬ್ಬರ ಖಾತೆಗೆ ಹಾಕುತ್ತೇವೆ ಎಂದರೂ ಹಾಕಲಿಲ್ಲ.ಅಡುಗೆ ಅನಿಲ 900 ರೂ., ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಹೆಣ್ಣು ಮಕ್ಕಳು ಸೇರಿದಂತೆ ಜನತೆ ಕುದಿಯುತ್ತಿದ್ದಾರೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ನಾನು ಬೆಳಗಾವಿಗೆ ಆಗಮಿಸಿದ್ದೇನೆ. ನಾಳೆ ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಎಂ.ಬಿ. ಪಾಟೀಲ್, ಆರ್.ವಿ.ದೇಶಪಾಂಡೆ ಸೇರಿದಂತೆ ಜಿಲ್ಲೆಯ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...