ಕಾರವಾರ: ಬೀದಿನಾಟಕ ಮಹಿಳಾ ತಂಡಗಳಿಂದ ಅರ್ಜಿ ಆಹ್ವಾನ

Source: S O News Service | By I.G. Bhatkali | Published on 31st May 2019, 6:30 PM | Coastal News | Don't Miss |

ಕಾರವಾರ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕಗಳನ್ನು ಪ್ರದರ್ಶಿಸಲು ಮಹಿಳಾ ತಂಡಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಮಹಿಳಾ ಕಲಾ ತಂಡಗಳು ಬೀದಿನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣಾ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿ ನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ಅದರಲ್ಲಿ ಒಬ್ಬರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಕಲಾವಿದರಾಗಿರಬೇಕು.

ತಂಡದ ಎಲ್ಲ ಕಲಾವಿದರೂ ಬ್ಯಾಂಕ್ ಖಾತೆ ಹಾಗೂ ಪಾನ್‍ಕಾರ್ಡ್ ಹೊಂದಿರಬೇಕು. ಅರ್ಜಿಯೊಂದಿಗೆ ಕಲಾವಿದರ ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಪಾನ್‍ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. ನಿಯಮಾನುಸಾರ ಒಂದು ತಂಡವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ತಮ್ಮ ಪ್ರದರ್ಶನದ ಸಾಮಥ್ರ್ಯದ ಆಧಾರದ ಮೇಲೆ ಸಮಿತಿ ಆಯ್ಕೆ ಮಾಡಲಿದೆ. ಆಯ್ಕೆಯಾದ ತಂಡಕ್ಕೆ ವಿಭಾಗ ಮಟ್ಟದಲ್ಲಿ ತರಬೇತಿ ನೀಡಲಾಗುವುದು. ಅರ್ಜಿಯನ್ನು 2019 ಜೂನ್ 7 ಸಂಜೆ 5ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ತಲುಪುವಂತೆ ಅರ್ಜಿ ಸಲ್ಲಿಸುವುದು.

ನಿಗದಿತ ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರವಾರ ಈ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382 226344 ಇಲ್ಲಿ ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಹಿಮಂತರಾಜು ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...