ಕ್ವಾರೆಂಟೈನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Source: so news | Published on 10th July 2020, 2:00 AM | State News | Don't Miss |


ಶಿವಮೊಗ್ಗ: ಕ್ವಾರೆಂಟೈನ್ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಸೂಚನೆಗಳನ್ನು ನೀಡಿದರು.
ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರೆಂಟೈನ್ ಮಾರ್ಗಸೂಚಿ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹೋಂ ಕ್ವಾರೆಂಟೈನ್ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲಿಯೇ ಎಫ್‍ಐಆರ್ ದಾಖಲಿಸಬೇಕು. ಮೂರನೇ ಬಾರಿ ಉಲ್ಲಂಘಿಸಿದರೆ ಐಪಿಸಿ 107ಅಡಿ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅವರು ಎಲ್ಲಾ ತಹಶೀಲ್ದಾರ್‍ಗಳಿಗೆ ಸೂಚನೆ ನೀಡಿದರು.
ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಭೌತಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಅಂತಹ ಅಂಗಡಿಯವರಿಗೆ ದಂಡ ವಿಧಿಸಬೇಕು. ಮಾಸ್ಕ್ ಧರಿಸುವುದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸಿ, ಉಲ್ಲಂಘಿಸಿದರೆ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಬೇಕು. ಜನರು ಸೇರುವಂತಹ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ನಿರಂತರವಾಗಿ ಅರಿವು ಮೂಡಿಸುವ ಕಾರ್ಯ ನಡೆಸಬೇಕು ಎಂದು ಅವರು ಹೇಳಿದರು.
ಮಾಹಿತಿ ನೀಡುವುದು ಕಡ್ಡಾಯ: ಯಾವುದೇ ಕಾರಣಕ್ಕೂ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಅವಕಾಶ ನೀಡಬಾರದು. ಮನೆಯಲ್ಲಿ ಕೇವಲ 50ಮಂದಿ ಮಿತಿಗೆ ಒಳಪಟ್ಟು ಮದುವೆ ನಡೆಸಲು ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರಬೇಕು. ಮದುವೆಯ ಬಳಿಕ ಕಡ್ಡಾಯವಾಗಿ ಮದುವೆಯಲ್ಲಿ ಭಾಗವಹಿಸಿದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸ್ಥಳೀಯಾಡಳಿತಕ್ಕೆ ಸಲ್ಲಿಸಬೇಕು. ಜಾತ್ರೆ, ಸಂತೆಗಳಿಗೆ ಅನುಮತಿಯನ್ನು ನೀಡಬಾರದು ಎಂದು ಅವರು ಸ್ಪಷ್ಟಪಡಿಸಿದರು.
ಸೌಲಭ್ಯ ಹೆಚ್ಚಳ: ಗಾಜನೂರಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈಗಾಗಲೇ ರೋಗ ಲಕ್ಷಣಗಳಿಲ್ಲದ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿ ಇನ್ನೂ ಹೆಚ್ಚುವರಿಯಾಗಿ 60ಹಾಸಿಗೆ ವ್ಯವಸ್ಥೆಯನ್ನು ತಕ್ಷಣ ಕಲ್ಪಿಸಬೇಕು. ಮೆಗ್ಗಾನ್‍ನಲ್ಲಿ ಸಹ ಹಾಸಿಗೆ ಸಾಮಥ್ರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರೋಗ ಲಕ್ಷಣವಿರುವ ವ್ಯಕ್ತಿಗಳ ಸ್ಯಾಂಪಲ್ ಸಂಗ್ರಹಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ತಾಲೂಕು ಮಟ್ಟದ ಸಮಿತಿ: ಜಿಲ್ಲಾ ಮಟ್ಟದ ಸರ್ವೇಕ್ಷಣಾ ಸಮಿತಿ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಸಹ ತಹಶೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಇದೇ ರೀತಿ ಗ್ರಾಮ, ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಪಡೆಯನ್ನು ತಕ್ಷಣ ರಚಿಸಿ ವರದಿಯನ್ನು ಸಲ್ಲಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ಭಟ್ಕಳ; ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಕೋವಿಡ್-19 ‘ಮರಳಿ ಸೃಷ್ಟಿಕರ್ತನ ಕಡೆಗೆ ಆಬಿಯಾನ’ಕ್ಕೆ ಚಾಲನೆ

ಭಟ್ಕಳ: ಇತ್ತಿಚೆಗೆ ನಡೆಯುತ್ತಿರುವ ಘಟನೆಗಳು ಮಾನವನನ್ನು ಎಚ್ಚರಿಸುತ್ತಿದ್ದು, ಮನುಷ್ಯರನ್ನು ಸರಿದಾರಿಗೆ ತರಲು ದೈವಿಕ ...

ಭಟ್ಕಳ: 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನದ ಬಿಸ್ಕತ್ ವಶ; ಪೊಲೀಸರ ಬಲೆಗೆ ಬಿದ್ದ ಶೈಲೇಶ್ ಮತ್ತು ವಿಫುಲ್

ಭಟ್ಕಳ: ಇಲ್ಲಿನ ಹೂವಿನ ಚೌಕ್ ಕ್ರಾಸ್ ಬಳಿ 60 ಲಕ್ಷ ಮೌಲ್ಯದ 1.5ಕೆಜಿ ಬಂಗಾರದ ನಮೂನೆಯ ಬಿಸ್ಕಿಟ್ ಮತ್ತು ಎಂಟು ಚಿನ್ನದ ಗಟ್ಟಿಗಳನ್ನು ...