ಕರ್ತವ್ಯದಲ್ಲಿ ಲೋಪ, ದುರ್ನಡತೆ ಕಂಡು ಬಂದಲ್ಲಿ ಕಠಿಣ ಕ್ರಮ; ಉಪ ಲೋಕಾಯುಕ್ತ ನ್ಯಾ. ಫಣೀಂದ್ರ

Source: SO News | By Laxmi Tanaya | Published on 2nd March 2024, 7:48 PM | Coastal News | Don't Miss |

ಕಾರವಾರ : ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ  ತೋರಿದಲ್ಲಿ ಅಂತಹವರ ವಿರುದ್ದ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಎಚ್ಚರಿಕೆ ನೀಡಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ, ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿದಾಗ ಅವುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು, ತಮ್ಮ ಕಚೇರಿ ವ್ಯಾಪ್ತಿಗೆ ಒಳಪಡದ ಅರ್ಜಿಯಾಗಿದ್ದಲ್ಲಿ ಅದನ್ನು ಸಂಬAಧಪಟ್ಟ ಇಲಾಖೆಗೆ ವರ್ಗಾಯಿಸಿ ಈ ಬಗ್ಗೆ ಅರ್ಜಿದಾರರಿಗೆ ಸೂಕ್ತ ಹಿಂಬರಹ ನೀಡಬೇಕು. ಕಾನೂನು ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಸರ್ಕಾರಿ ನೌಕರರು ಭ್ರಷ್ಠಾಚಾರದಲ್ಲಿ ತೊಡಗಿಕೊಳ್ಳುವುದು, ಸ್ವಜನ ಪಕ್ಷಪಾತ, ದುರ್ನಡತೆ ,ಅಶಿಸ್ತು, ಕಳಪೆ ಕಾಮಗಾರಿಗಳು, ಮತ್ತು ದುರುದ್ದೇಶ ಪೀಡಿತ ಕರ್ತವ್ಯ ಲೋಪದಲ್ಲಿ ತೊಡಗಿದ್ದಲ್ಲಿ ಅಂತಹವರ ವಿರುದ್ದ ಲೋಕಾಯುಕ್ತ ಕಾಯ್ದೆಯಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ನೌಕರಿಗೆ ಸಾರ್ವಜನಿಕರ ಸೇವೆ ಮಾಡಲು ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಾರ್ವಜನಿಕರಿಗೆ  ಪ್ರಾಮಾಣಿಕ ರೀತಿಯಲ್ಲಿ ಉತ್ತಮ ಸೇವೆ ಒದಗಿಸಿ ಅವರಿಗೆ ನಿಮ್ಮ ಬಗ್ಗೆ ಸದಾಭಿಪ್ರಾಯ ಮೂಡುವಂತೆ ಮಾಡಿ, ಕಿರಿಯ ಅಧಿಕಾರಿಗಳು ತಪ್ಪು ಮಾಡಿದಲ್ಲಿ ಹಿರಿಯ ಅಧಿಕಾರಿಗಳು ಅದನ್ನು ಸರಿಪಡಿಸಬೇಕು. ಸಾರ್ವಜನಿಕ ಆಸ್ತಿ ರಕ್ಷಣೆ ನೌಕರರ ಪ್ರಥಮಾದ್ಯತೆಯಾಗಬೇಕು ಎಂದರು.

ಸಾರ್ವಜನಿಕರು ಸರ್ಕಾರಿ ನೌಕರರ ವಿರುದ್ದ ದೂರುಗಳನ್ನು ಸೂಕ್ತ ಅರ್ಜಿ ನಮೂನೆಯಲ್ಲಿ ಸಲ್ಲಿಸಬೇಕು. ಲೋಕಾಯುಕ್ತ ವ್ಯಾಪ್ತಿಗೆ ಒಳಪಡುವ ದೂರುಗಳನ್ನು ಮಾತ್ರ ಲೋಕಾಯುಕ್ತ ಸಂಸ್ಥೆ ವಿಚಾರಣೆ ನಡೆಸಲಿದ್ದು, ಖಾಸಗಿ ದೂರುಗಳು ಮತ್ತು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ದೂರುಗಳ ಬಗ್ಗೆ ತನಿಖೆ ನಡೆಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗಿಲ್ಲ. ಪ್ರಾಮಾಣಿಕ ಅಧಿಕಾರಿಗಳ ವಿರುದ್ದ ಸುಳ್ಳು ದೂರು ಸಲ್ಲಿಸುವವರ ವಿರುದ್ದವೂ ಕೂಡಾ ಕ್ರಮ ಕೈಗೊಳ್ಳವ ಅಧಿಕಾರಿ ಸಂಸ್ಥೆಗಿದೆ ಎಂದರು.

    ತಾವು ಉಪ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನಿಡಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸುತ್ತಿದ್ದು, ಲೋಕಾಯುಕ್ತ ಸಂಸ್ಥೆಯ ಕಾರ್ಯವ್ಯಾಪ್ತಿಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯು ೧೩ನೇ ಜಿಲ್ಲಾ ಭೇಟಿ ಆಗಿದ್ದು, ಈ ವರೆಗೆ ಭೇಟಿ ನೀಡಿರುವ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಭೇಟಿಯ ನಂತರ ನೌಕರರ ಕಾರ್ಯ ವಿಧಾನಗಳಲ್ಲಿ ಹಲವು ಸುಧಾರಣಾ ಕ್ರಮಗಳು ಆಗಿವೆ. ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳಿಗೆ ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದರು.

ಸಂವಿಧಾನ ಎಲ್ಲರಿಗೂ ಸಮಬಾಳು ಎಲ್ಲರಿಗೂ ಸಮಪಾಲು ತತ್ವದಂತೆ ಸಾರ್ವಜನಿಕ ಸೇವೆಗಳನ್ನು ಎಲ್ಲರಿಗೂ ತಲುಪಿಸುವ ಮಹತ್ವದ ಜವಾಬ್ದಾರಿ ಹೊಂದಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಲೋಕಾಯುಕ್ತ ಉಪ ನಿಬಂಧಕರಾದ ರಾಜಶೇಖರ್, ಚನ್ನಕೇಶವ ರೆಡ್ಡಿ, ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರೇಣುಕಾ ರಾಯ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಸ್ವಾಗತಿಸಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...