ನಾಳೆ ಬಲವಂತದ ಬಂದ್ ಮಾಡಿಸಿದರೆ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 4th December 2020, 8:36 PM | State News |

ಕಾರವಾರ : ಕನ್ನಡ ಪರ ಸಂಘಟನೆಗಳು ಕರೆ ನೀಡಿದ ನಾಳೆಯ ಬಂದ್ ಕೈಬಿಡುವಂತೆ 
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಕಾರವಾರದಲ್ಲಿ ಮಾದ್ಯಮಗಳಿಗೆ ಮಾತನಾಡಿದ ಅವರು,   ಸುಪ್ರಿಮಕೋರ್ಟ್ ಆದೇಶದಂತೆ ಬಂದ್ ಮಾಡುವಂತಿಲ್ಲ. ಬಂದ್ ಮಾಡಿ ಜನಜೀವನ ಅಸ್ತವ್ಯಸ್ತ ಮಾಡುವುದು ಸರಿಯಲ್ಲ. ಪ್ರತಿಭಟನೆ ಮಾಡಲು ಹಲವು ರೀತಿಯಲ್ಲಿ ಅವಕಾಶಗಳಿವೆ. ಹೀಗಾಗಿ ಬಂದ್ ಮಾಡುವುದು ಸರಿಯಲ್ಲ.

ನಾಳೆ ಸರ್ಕಾರಿ ಕಚೇರಿ, ಬಸ್ ಓಡಾಟ ಎಂದಿನಂತಿರಲಿದೆ. ಒತ್ತಾಯದಿಂದ ಬಂದ್ ಮಾಡಿಸಿದರೇ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು  ಎಂದು ಎಚ್ಚರಿಕೆ ನೀಡಿದ್ದಾರೆ. 

ಹೊಸವರ್ಷದ ಸಂದರ್ಭದಲ್ಲಿ ನೈಟ್ ಕರ್ಪ್ಯೂ ಹೇರಿಕೆ ವಿಚಾರಕ್ಕೆ ಪ್ರತಿಕ್ರೀಯಿಸಿದ ಅವರು,  ನೈಟ್ ಕರ್ಪ್ಯೂ ಬಗ್ಗೆ ಹಲವು ಸಲಹೆ ಸೂಚನೆಗಳು ಬಂದಿವೆ. ಮುಖ್ಯಮಂತ್ರಿಗಳು ಇನ್ನೆರಡು ದಿನದೊಳಗೆ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆಂದು ಅವರು ಹೇಳಿದರು

Read These Next

ದಕ್ಷಿಣಕನ್ನಡ ಜಿಲ್ಲೆ ಕೋಮು ಸೌಹಾರ್ಧತೆ ಕಾಪಾಡಿಕೊಂಡರೆ ರಾಜ್ಯಕ್ಕೆ ಮಾದರಿಯಾಗಲಿದೆ: ಅಬ್ದುಲ್ ಅಝೀಮ್

ಮಂಗಳೂರು : ವಕ್ಫ್ ಭೂಮಿ ಅಕ್ರಮ ಪ್ರಕರಣಗಳ ಬಗ್ಗೆ ಮುಂದಿನ ಸದನದ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಈ ಬಗ್ಗೆ ವರದಿ ಸರಕಾರಕ್ಕೆ ...

ಹು-ಧಾ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ. ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ಸಮನ್ವಯತೆಯಿಂದ ಕಾರ್ಯಮಾಡಬೇಕು - ಜಿಲ್ಲಾಧಿಕಾರಿ ನಿತೇಶ ಪಾಟೀಲ

ಹು-ಧಾ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ. ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ...

ಚೆನ್ನಮ್ಮ ವೃತ್ತ ಫ್ಲೈ ಓವರ್ ನಿರ್ಮಾಣಕ್ಕೆ ಶಂಕುಸ್ಥಾಪನೆ. ಉತ್ತರ ಕರ್ನಾಟಕ ಭಾಗದ ರಾಷ್ಟೀಯ ಹೆದ್ದಾರಿಗಳ ಅಭಿವೃದ್ಧಿಗೆ 21 ಸಾವಿರ ಕೋಟಿ ಬಿಡುಗಡೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಹುಬ್ಬಳ್ಳಿ : ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ 21 ಸಾವಿರ ಕೋಟಿ ರೂಪಾಯಿಗಳನ್ನು ...

ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೋವಿಡ್ ಲಸಿಕಾಕರಣಕ್ಕೆ ಚಾಲನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ

ಹುಬ್ಬಳ್ಳಿ :‌ ಕೋವಿಡ್ ತಡೆಯಲು ಇಂದಿನಿಂದ ದೇಶದಾದ್ಯಂತ ಪ್ರಾರಂಭವಾದ ಕೋವಿಶೀಲ್ಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದ ...