ಉಡುಪಿ: ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಕೆ ನಿಷೇಧ: ಉಡುಪಿ ಜಿಲ್ಲಾಧಿಕಾರಿ, ಕಾಲ್ನಡಿಗೆಗೆ ಮಾತ್ರ ಅವಕಾಶ, ತಪ್ಪಿದರೆ ವಾಹನ ಜಪ್ತಿ, ಪ್ರಕರಣ ದಾಖಲು

Source: S.O. News service | By S O News | Published on 10th May 2021, 11:26 AM | Coastal News |

ಉಡುಪಿ: ಲಾಕ್ ಡೌನ್ ನ ಹೊಸ ಮಾರ್ಗಸೂಚಿ ಯಂತೆ ಮೇ 10ರಿಂದ ಹೊಟೇಲ್‌ಗಳಲ್ಲಿ ಪಾರ್ಸೆಲ್, ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಸಾರ್ವಜನಿಕರು ಯಾವುದೇ ವಾಹನ ಬಳಸುವಂತಿಲ್ಲ. ತಮ್ಮ ಮನೆ ಸಮೀಪದ ಅಂಗಡಿಗಳಿಗೆ ನಡೆದುಕೊಂಡು ಹೋಗಿಯೇ ವಸ್ತುಗಳನ್ನು ಖರೀದಿಸಬೇಕು. ಇದನ್ನು ಉಲ್ಲಂಘಿಸಿದರೆ ವಾಹನ ಮುಟ್ಟುಗೋಲು ಹಾಕುವುದಲ್ಲದೆ ಎಪಿಡಮಿಕ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಪಂ ಕಚೇರಿ ಸಭಾಂಗಣದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಟೇಲ್ ಗಳಲ್ಲಿ ಬೆಳಗ್ಗೆ 6ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂತರ್ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಸಂಚಾರ ವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ, ಆರೋಗ್ಯ ಕಾರ್ಯಗಳಿಗಾಗಿ ಆರೋಗ್ಯ ಸಿಬ್ಬಂದಿಗೆ, ಕೋರ್ಟ್ ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಅಂತರ್‌ ರಾಜ್ಯ ಮತ್ತು ಜಿಲ್ಲಾ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

ರೈಲ್ವೆ ಮತ್ತು ವಿಮಾನ ಯಾನ ಮಾಡುವವರು ಟಿಕೆಟ್ ನೊಂದಿಗೆ

ಮೀನುಗಾರಿಕೆ ಚಟುವಟಿಕೆಗೆ ಅವಕಾಶ ಇಲ್ಲ. ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀಸುವುದನ್ನು ನಿರ್ಬಂಧಿಸಲಾಗಿದೆ. ಮದುವೆಯಲ್ಲಿ 50 ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲಾ ಮದುವೆಯಾದರೆ ತಹಶೀಲ್ದಾರ್ ಅದಕ್ಕೆ ಅನುಮತಿ ಮತ್ತು ಪಾಸ್ ನೀಡಲಿದ್ದಾರೆ. ಅದು ಬಿಟ್ಟು ಮೆಹಂದಿಗೆ ಅವಕಾಶ ಇಲ್ಲ. ಅಂತ್ಯಕ್ರಿಯೆಗೆ 5 ಮಂದಿಗೆ ಮಾತ್ರ ಅವಕಾಶ ಒದಗಿಸಲಾಗಿದೆ.

ಜಿ.ಜಗದೀಶ್, ಉಡುಪಿ ಜಿಲ್ಲಾಧಿಕಾರಿ

ಸಂಚಾರ ಮಾಡಬಹುದು. ತುರ್ತು ಆರೋಗ್ಯ ಕಾರಣಕ್ಕಾಗಿ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಓಡಾಟಕ್ಕೆ ಅವಕಾಶ ಮಾಡಲಾಗಿದೆ. ರೋಗಿ ಮತ್ತು ಅವರ ಪರಿಚಾರಕರಿಗೆ ದಾಖಲೆಯೊಂದಿಗೆ ಓಡಾಟ ಮಾಡಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಾಣಿಜ್ಯ ಚಟುವಟಿಕೆಗಳು: ದಿನಸಿ, ಹಣ್ಣು ತರಕಾರಿ, ಮಾಂಸ, ಮೀನು, ಪ್ರಾಣಿಗಳ ಮೇವುಗಳ ಮಾರಾಟಕ್ಕೆ ಬೆಳಗ್ಗೆ 6ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅವುಗಳ ಖರೀದಿಸಲು ವಾಹನ ಬಳಕೆಯನ್ನು ನಿಷೇಧಿಸಲಾಗಿದೆ. ಮನೆ ಸಮೀಪದ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿಸಬೇಕು. ಅದು ಬಿಟ್ಟು ಉಳಿದ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮದ್ಯದಂಗಡಿಗಳಿಗೆ ಬೆಳಗ್ಗೆ 6ರಿಂದ 10ಗಂಟೆಯವರೆಗೆ ಪಾರ್ಸೆಲ್‌ಗೆ

ನಿಯಮ ಬದಲಾವಣೆಗೆ ಮನವಿ

ಹೊಸ ಮಾರ್ಗಸೂಚಿಯಲ್ಲಿ ನಡೆದುಕೊಂಡೇ ಹೋಗಿ ಅಗತ್ಯ ವಸ್ತುಗಳನ್ನು ಖರೀದಿಸುವಂತೆ ಸರಕಾರ ಸೂಚನೆ ನೀಡಿದೆ. ಆದರೆ ಕರಾವಳಿ ಜಿಲ್ಲೆಯಲ್ಲಿ ಅದು ಪಾಲಿಸಲು ಸಾಧ್ಯವಾಗದ ಕಾರಣ ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲಾಗುವುದು. ಸರಕಾರ ಗ್ರಾಮೀಣ ಪ್ರದೇಶದಲ್ಲಿ ದೂರ ಇರುವ ಅಂಗಡಿಗಳಿಗೆ ವಾಹನಗಳಲ್ಲಿ ತೆರಳಲು ಸೂಚಿಸಿದರೆ ನಾವು ಅವಕಾಶ ಮಾಡಿಕೊಡುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅವಕಾಶ ಮಾಡಿಕೊಡಲಾಗಿದೆ. ಹಾಪ್ ಕಾಮ್ಸ್ ಮತ್ತು ಕೆಎಂಎಫ್ ಮಿಲ್ಕ್ ಬೂತ್‌ಗಳನ್ನು ತೆರೆಯಲು ಮತ್ತು ತಳ್ಳು ಗಾಡಿಗಳಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಅದು ಬಿಟ್ಟು ಹೊಟೇಲು, ಬೇಕರಿಗಳಲ್ಲಿ ಹಾಲು ಮಾರಾಟಕ್ಕೆ ಅವಕಾಶ ಇಲ್ಲ. ಹೋಂ ಡೆಲಿವರಿಗೆ 24ಗಂಟೆಗಳ ಕಾಲವೂ ವಾಹನದೊಂದಿಗೆ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬ್ಯಾಂಕ್, ಎಟಿಎಂ , ವಿಮಾ ಕಂಪೆನಿಗಳು ತೆರೆದಿರುತ್ತದೆ ಎಂದರು.

ಹಾರ್ಡ್‌ವೇರ್ ಶಾಪ್ ಬಂದ್‌: ಕೈಗಾರಿಕೆ ಅಗತ್ಯ ವಸ್ತುಗಳ ತಯಾರಿಕಾ ಘಟಕಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಕಂಟೈನ್ಮೆಂಟ್ ವಲಯದ ಹೊರಗೆ ಸೈಟ್‌ನಲ್ಲಿರುವ ಕಟ್ಟಡ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಕಾರ್ಮಿಕರನ್ನು ಹೊರಗಡೆಯಿಂದ ಕರೆದುಕೊಂಡು ಬರಲು ಅವಕಾಶ ಇಲ್ಲ. ಹಾರ್ಡ್‌ವೇರ್ ಅಂಗಡಿ ತೆರೆಯಲು ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೆಲಸ ಇಲ್ಲದಿದ್ದರೆ ಕಾರ್ಮಿಕರನ್ನು ಬೀದಿಯಲ್ಲಿ ಬಿಡುವ ಕಾರ್ಮಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಕೆಲಸ ಮಾಡಿಸಲು ಆಗದಿದ್ದರೆ ನಾಳೆ ಸಂಜೆಯೊಳಗೆ ಕಾರ್ಮಿಕರನ್ನು ಅವರ ಮನೆಗಳಿಗೆ ಕಳುಹಿಸಿಕೊಡಬೇಕು ಎಂದು ಅವರು ಸೂಚನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸಿಇಒ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...