ಹೊನ್ನಾವರ: ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

Source: S O News service | By I.G. Bhatkali | Published on 24th November 2021, 11:32 AM | Coastal News | Don't Miss |

ಹೊನ್ನಾವರ: ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆ ಕೊಟ್ಟು ಎಸ್‌ಡಿಎಂ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ವಿಶಾಲ ಗೌಡ (17) ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮಂಗಳವಾರ ಸಂಜೆ ನಡೆದಿದೆ.

ಮುಗ್ವಾ ಹಳಗೇರಿ ಮೂಲದ ವಿಶಾಲ್ ಪ್ರಥಮ ಪಿಯುಸಿಗೆ ಸೇರಿದ ನಂತರವಷ್ಟೇ ಕೋಟಾದಿಂದ ಕಾಲೇಜಿಗೆ ಬರುತ್ತಿದ್ದ ಎನ್ನಲಾಗಿದೆ. ಕೃಷಿಕರಾಗಿರುವ ತಂದೆ ತಾಯಿಯ ಕಿರಿಯ ಮಗನಾಗಿದ್ದ ಈತನನ್ನು ಚೆನ್ನಾಗಿ ಓದಿಸುವ ಹಂಬಲ ಇಟ್ಟುಕೊಂಡಿದ್ದರೂ ಯಾರಿಗೂ ಹೇಳದೇ ಕೇಳದೇ ಆತ್ಮಹತ್ಯೆಯಂತ ದುಡುಕಿನ ನಿರ್ಧಾರಕ್ಕೆ ಮುಂದಾಗಿರುವುದು ಹೆತ್ತವರನ್ನು ಆಘಾತಕ್ಕೀಡು ಮಾಡಿದೆ.

ಭೀಕರ ದೃಶ್ಯ: ರೈಲಿನ ಗಾಲಿಗೆ ಸಿಕ್ಕು ದೇಹ ಛಿದ್ರವಾಗಿದ್ದು, ರುಂಡ ಒಂದು ಕಡೆ ಮುಂಡ ಒಂದು ಕಡೆ ಬಿದ್ದಿದೆ. ಸ್ಥಳಕ್ಕೆ ಮಂಕಿ ಪೊಲೀಸರು ದೌಡಾಯಿಸಿ ಸಾರ್ವಜನಿಕರ ಸಹಕಾರದಿಂದ ಶವವನ್ನು ಸ್ಥಳಾಂತರಿಸಿದ್ದಾರೆ. ಬಾಳಿ ಬದುಕಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...