ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

Source: SO News | By Laxmi Tanaya | Published on 3rd December 2022, 10:23 PM | State News | Don't Miss |

ಬಳ್ಳಾರಿ : 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.

ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ನಡೆಯುತ್ತಿದ್ದು, 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳು ಹೆಸರನ್ನು ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಯುವ ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ತಮ್ಮ ಮತವನ್ನು ಮಾರಿಕೊಳ್ಳಬಾರದು. ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಗೊಳ್ಳಲು ಸ್ವಯಂ ಪ್ರೇರಿತವಾಗಿ ಅರ್ಹ ಮತ್ತು ಉತ್ತಮ ನಾಯಕರನ್ನು ಆರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವಿಕೆ ಕಾರ್ಯಕ್ರಮ ನಡೆಯುತ್ತಿದ್ದು, ವಿದ್ಯಾರ್ಥಿಗಳು ನಿಮ್ಮವರಿಗೂ ತಿಳಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿ, ಪ್ರಜಾಸ್ವಾಮ್ಯ ವ್ಯವಸ್ಥೆ ಎಂದರೆ ಅದು ಜನರ ಅಧಿಕಾರ, ಆ ಅಧಿಕಾರವು ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ಸಿಗುತ್ತದೆ ಎಂದು ತಿಳಿಸಿದರು.

ನಂತರದಲ್ಲಿ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳೊಂದಿಗೆ ಮತದಾರರ ಪಟ್ಟಿಗೆ ಸೇರ್ಪಡೆಗೆ ಸಂಬಂಧಿಸಿದಂತೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತರಾದ ಹೇಮಂತ್.ಎನ್, ಪ್ರೊಬೆಷನರಿ ಅಧಿಕಾರಿ ರೂಪಿಂದರ್ ಕೌರ್, ತಹಶೀಲ್ದಾರ ವಿಶ್ವನಾಥ, ಪ್ರಾಂಶುಪಾಲರಾದ ಮಂಜುನಾಥ ರೆಡ್ಡಿ, ಲೀಡ್ ಕಾಲೇಜ್ ಮತದಾರರ ಕ್ಲಬ್ ನ ಸಂಯೋಜಕರಾದ ಜನಾರ್ಧನ ರೆಡ್ಡಿ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...