ಭಟ್ಕಳ ಅರ್ಬನ್ ಬ್ಯಾಂಕಿನ ನಿವೃತ್ತ ಪ್ರಧಾನ ವ್ಯವಸ್ಥಾಕ ಸುಭಾಷ್ ಶೆಟ್ಟಿಗೆ ಬೀಳ್ಕೊಡುಗೆ

Source: sonews | By Staff Correspondent | Published on 31st May 2020, 8:00 PM | Coastal News | Don't Miss |

ಭಟ್ಕಳ: ರಾಜ್ಯದಲ್ಲಿನ ಪ್ರತಿಷ್ಟಿತ ಅರ್ಬನ್ ಕೋ-ಅಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟ್ಕಳ ಅರ್ಬನ್ ಬ್ಯಾಂಕಿನಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ಪ್ರಧಾನ ವ್ಯವಸ್ಥಾಪಕ ಹುದ್ದೆಯನ್ನು ಅಲಂಕರಿಸಿ ನಿವೃತ್ತರಾದ ಸುಭಾಷ ಎಂ. ಶೆಟ್ಟಿಯವರನ್ನು ಬ್ಯಾಂಕಿನ ಸಿಬ್ಬಂದಿಗಳ ಪರವಾಗಿ ಹಾರ ಹಾಕಿ, ಶಾಲು ಹೊದಿಸಿ, ನೆನಪಿನ ಕಾಣಿಕೆಯನ್ನು ನೀಡಿ ಬೀಳ್ಕೊಡಲಾಯಿತು. 

ಬ್ಯಾಂಕಿನ ಹಫಿಸ್ಕಾ ಹಾಲ್‍ನಲ್ಲಿ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಬ್ಯಾಂಕಿನ ವತಿಯಿಂದ ನೀಡಿದ ಗೌರವವನ್ನು ಸ್ವೀಕರಿಸಿ ಮಾತನಾಡುತ್ತಾ ತಮ್ಮ ಸುಧೀರ್ಘ 37 ವರ್ಷಗಳ ಸೇವೆಯನ್ನು ಸ್ಮರಿಸಿದರು. ಬ್ಯಾಂಕಿನಲ್ಲಿ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟ ಬ್ಯಾಂಕಿನ ಆಡಳಿತ ಮಂಡಳಿಯವರು ಹಾಗೂ ತಮ್ಮ ಹಿರಿಯ ಅಧಿಕಾರಿಗಳನ್ನು ನೆನೆಸಿದ ಅವರು, ತಮಗೆ ಉತ್ತವಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಸಿಬ್ಬಂದಿಗಳಿಗೂ ಕೂಡಾ ಕೃತಜ್ಞತೆ ಸಲ್ಲಿಸಿದರು. 

ಇದೇ ಸಂದರ್ಭದಲ್ಲಿ ನಿವೃತ್ತರಾದ ಕಿರಿಯ ಸಹಾಯಕ ಮುಕುಂದ ತಡಿಯಾರ್ ಹಾಗೂ ರೆಕಾರ್ಡ ಕೀಪರ್/ಟೆಲ್ಲರ್ ಲಕ್ಷ್ಮಣ ವಿ. ಮಡಿವಾಳ ಇವರನ್ನು ಕೂಡಾ ಬ್ಯಾಂಕಿನ ವತಿಯಿಂದ ಹಾರ ಹಾಕಿ, ಶಾಲು ಹೊದಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ನಿರ್ದೇಶಕ ಮಾಸ್ತಿ ಎಂ. ಮೊಗೇರ, ಬ್ಯಾಂಕಿನ ಉನ್ನತ ಹುದ್ದೆಯ ಅಧಿಕಾರವನ್ನು ವಹಿಸಿಕೊಂಡ ಶಂಭು ಎನ್. ಹೆಗಡೆ ಮುಂತಾದವರು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಮುಖ್ಯ ಶಾಖೆಯ ವ್ಯವಸ್ಥಾಪಕ ಇಸ್ಮಾಯಿಲ್, ಶಾಖಾ ವ್ಯವಸ್ಥಾಪಕರುಗಳಾದ ಜಿ.ಪಿ. ಪ್ರಭು, ವಿನೋದ ಪ್ರಭು, ಪ್ರಶಾಂತ್ ಮುರ್ಡೇಶ್ವರ ಸೇರಿದಂತೆ ಶಾಖಾ ವ್ಯವಸ್ಥಾಪಕರುಗಳು, ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿರಿಯ ವ್ಯವಸ್ಥಾಪಕ ವಸಂತ ಎಸ್. ಶಾಸ್ತ್ರಿ ನಿರೂಪಿಸಿದರು. 


 

Read These Next

ಕೋವಿಡ್-19 ತಡೆಗಟ್ಟಲು ವರ್ಗಾವಣೆ ಮಾಡಿದರೂ ಪರವಾಗಿಲ್ಲ ಕಠಿಣ ಕ್ರಮ ಕೈಗೊಂಡು ಕೊರೊನ ನಿಯಂತ್ರಿಸಲು ಪ್ರಯತ್ನಿಸುತ್ತೇನೆ : ತಹಶೀಲ್ದಾರ ಮುಂದಲಮನಿ

ಮುಂಡಗೋಡ : ನನ್ನನ್ನು ಇಲ್ಲಿಂದ ವರ್ಗಾವಣೆ ಮಾಡಿದರು ಪರವಾಗಿಲ್ಲ ಕೋವಿಡ್ 19 ನಿಯಂತ್ರಣಕ್ಕೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ...