ಅಕ್ರಮವಾಗಿ ಮರಳು ಸಾಗಾಟ ತಹಸೀಲ್ದಾರನಿಂದ ಡಿಢೀರ ದಾಳಿ

Source: S.O. News Service | Published on 1st September 2019, 8:11 PM | Coastal News | Don't Miss |

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮಾವಳ್ಳಿ ಹೋಬಳಿಯ ಶಿರಾಲಿ-1 ಗ್ರಾಮದ ಮಣ್ಣಹೊಂಡ ಮಜರೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಒಂದು ಲಾರಿ ಮರಳನ್ನು ಶುಕ್ರವಾರ ರಾತ್ರಿ ತಹಶಿಲ್ದಾರ ವಿ.ಪಿ. ಕೊಟ್ರಳ್ಳಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಡಿಢೀರ ದಾಳಿ ನಡೆಸಿ ಮರಳು ತುಂಬಿದ ಲಾರಿ ವಶಕ್ಕೆ ಪಡೆದುಕೊಂಡರು.

ಮಾರಾಟ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಬೇರೆಡೆ ಮಾಡಲು ಲಾರಿಯಲ್ಲಿ ತುಂಬುತ್ತಿರುವ ಖಚಿತ ಮಾಹಿತಿಯ ಮೇರೆಗೆ ತಹಸೀಲ್ದಾರ ಸಮ್ಮುಖದಲ್ಲಿ ಲಾರಿಯನ್ನು ವಶಕ್ಕೆ ಪಡೆದುಕೊಂಡು ತಹಸೀಲ್ದಾರ ಕಛೇರಿಯಲ್ಲಿ ಇರಿಸಲಾಗಿದ್ದು ಶನಿವಾರ ಬೆಳಿಗ್ಗೆ ಅದೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಎರಡು ಲಾರಿಯಾಗುವಷ್ಟು ಮರಳನ್ನು ವಶಪಡಿಸಿಕೊಂಡು ಆ ಮರಳನ್ನು ಸರ್ಕಾರಿ ಕಾಮಗಾರಿಗೆ ಉಪಯೋಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಗೆ ಒಪ್ಪಿಸಿದ್ದಾರೆ. 

ಕಾರ್ಯಚರಣೆಯಲ್ಲಿ ಮಾವಳ್ಳಿ ಕಂದಾಯ ನಿರೀಕ್ಷಕ ಚಾನ ಬಾಷಾ, ಗ್ರಾಮ ಲೆಕ್ಕಾಧಿಕಾರಿ ಶರಣ ಗೌಡ, ಜಿಲ್ಲಾ ಪಂಚಾಯತ ಇಂಜಿನಿಯರ್ ಬಸವರಾಜ, ಗ್ರಾಮ ಸಹಾಯಕರು ಇದ್ದರು. 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...