ಸಕ್ಕರೆ ಕಾಯಿಲೆ ಹೆಚ್ಚು ಯುವಕರನ್ನು ಕಾಡುತ್ತಿದೆ: ಡಾ|| ಎನ್ ರಮೇಶ್

Source: SO News | By Laxmi Tanaya | Published on 23rd November 2020, 6:57 PM | State News | Don't Miss |

ಹಾಸನ : ದೈಹಿಕ ಮತ್ತು ಮಾನಸಿಕ ಲವಲವಿಕೆ ಇಲ್ಲದೆ ಬೊಜ್ಜುತನ ಉಳ್ಳವರಲ್ಲಿ ಸಕ್ಕರೆ ಕಾಯಿಲೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ವಯೋವೃದ್ಧರು ಅಲ್ಲದೆ ಯುವಕರಲ್ಲೂ ಸಹ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ|| ಎನ್. ರಮೇಶ್ ವಿಷಾದಿಸಿದರು.

  ಭಾರತೀಯ ವೈದ್ಯಕೀಯ ಸಂಘ ಹಾಸನ ಶಾಖೆಯಿಂದ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ತಜ್ಞ ವೈದ್ಯರುಗಳೊಂದಿಗೆ ಸಂವಾದ ಕಾರ್ಯಕ್ರಮ ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯಿತು. 

 ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಕುಮಾರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘ ರಾಜ್ಯ ಉಪಾಧ್ಯಕ್ಷರಾದ ಡಾ.ಕೆ ನಾಗೇಶ್, ತಜ್ಞ ವೈದ್ಯರಾದ ಡಾ ಎಂ ಆರ್ ಪದ್ಮಪ್ರಸಾದ್, ಪ್ರಸೂತಿ ತಜ್ಞರಾದ ಡಾ. ಏ.ಸಾವಿತ್ರಿ, ಮೂತ್ರ ಪಿಂಡ ತಜ್ಞರಾದ ಡಾ.ಪವನ್, ಡಾ. ಮಧುಸೂದನ್, ನೇತ್ರತಜ್ಞ  ಡಾ.ಶಿವಪ್ರಸಾದ್, ಹೃದಯ ತಜ್ಞ ಡಾ ಅನುಪ್ ರವರು ಭಾಗವಹಿಸಿದ್ದರು.

 ಸಂವಾದದಲ್ಲಿ ಸಾರ್ವಜನಿಕರು ಸಕ್ಕರೆ ಕಾಯಿಲೆಯ ಬಗ್ಗೆ ತಜ್ಞ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡರು. ಡಾ.ವಾಗೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...