ಸುಕ್ರಿ ಬೊಮ್ಮುಗೌಡ ಚೇತರಿಕೆ

Source: S.O. News Service | By MV Bhatkal | Published on 7th July 2019, 6:50 PM | Coastal News | Don't Miss |

ಕಾರವಾರ: ಉಸಿರಾಟದ ಸಮಸ್ಯೆಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಜಾನಪದ ಗಾಯಕಿ ಸುಕ್ರಿ ಬೊಮ್ಮುಗೌಡ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಅವರನ್ನು ಶುಕ್ರವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಸಂಸದ ಅನಂತಕುಮಾರ ಹೆಗಡೆ ಆರೋಗ್ಯ ವಿಚಾರಿಸಿದರು.ಹಣ್ಣು ಹಂಪಲು ನೀಡಿ,ಅಜ್ಜಿಯನ್ನು ಸರಿಯಾಗಿ ಆರೈಕೆ ಮಾಡುವಂತೆ ವೈದ್ಯರಿಗೆ ಸೂಚಿಸಿದರು.
ಈ ವೇಳೆ ಶಾಸಕಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಗಣಪತಿ ಉಳ್ವೇಕರ್, ಮಾಧ್ಯಮ ಸಂಚಾಲಕ ನಾಗರಾಜ ನಾಯಕ ಇದ್ದರು.
ಇದಕ್ಕೂ ಮೊದಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕೂಡ ಸುಕ್ರಜ್ಜಿಯ ಆರೋಗ್ಯ ವಿಚಾರಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...