ಮಳೆಗಾಗಿ ದೇವರ ಮೊರೆ ಹೋದ ಶಾಸಕ ಸುನೀಲ ನಾಯ್ಕ

Source: so news | By MV Bhatkal | Published on 3rd June 2019, 12:40 AM | Coastal News | Don't Miss |

ಭಟ್ಕಳ:ಜಿಲ್ಲೆಯಾದ್ಯಂತ ಈ ಬಾರಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಮುಂಗಾರು ಮಳೆ ನಿಗದಿತ ಸಮಯದಲ್ಲಿ ಜಿಲ್ಲೆಯನ್ನು ಪ್ರವೇಶಿಸದಿದ್ದರೆ. ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಲಿದೆ. ಈ ನಡುವೆ  ಶಾಸಕ ಸುನೀಲ ನಾಯ್ಕ ಅವರು ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.ಭಟ್ಕಳ ತಾಲ್ಲೂಕಿಗೆ ನೀರುಣಿಸುತ್ತಿದ್ದ ಕಡವಿನಕಟ್ಟೆ ನದಿಯಲ್ಲಿ ಹೂಳು ತುಂಬಿ ಈ ಬಾರಿ ನೀರಿಗೆ ತತ್ವಾರ ಉಂಟಾಗಿದೆ. ಸರ್ಕಾರಿ ಲೆಕ್ಕಾಚಾರದಂತೆ, ಭಟ್ಕಳದಲ್ಲಿರುವ ಒಟ್ಟು 52 ಕೆರೆಗಳ ಪರಿಸ್ಥಿತಿಯೂ ಇದೇ ಆಗಿದೆ. ನೀರಿಲ್ಲದೇ ಹಲವೆಡೆ ಮರ, ಸಸಿಗಳು ಒಣಗಿ ಹೋಗಿವೆ. ನೀರಿನ ಮೂಲಗಳೆಲ್ಲವೂ ಬತ್ತಿ ಹೋಗಿರುವುದರಿಂದ ದೊಡ್ಡ ದೊಡ್ಡ ಬಾವಿ, ಕೆರೆಗಳನ್ನು ಹೊಂದಿರುವ ಕೃಷಿಕರೂ ದಿನಬಳಕೆಗೆ ಟ್ಯಾಂಕರ್ ನೀರನ್ನು ಅವಲಂಬಿಸುವ ಸ್ಥಿತಿ ಇದೆ. ಕೆಲವೆಡೆ ದುಡ್ಡು ಕೊಟ್ಟರೂ ಟ್ಯಾಂಕರ್ ನೀರು ಸಿಗದ ಪರಿಸ್ಥಿತಿಯೂ ಇದೆ.

ಇದನ್ನೆಲ್ಲ ಗಮನಿಸಿದ ಸುನೀಲ ನಾಯ್ಕ, ಭಾನುವಾರ ಭಟ್ಕಳದ ಚನ್ನಪಟ್ಟಣ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಕುಡಿಯುವ ನೀರಿನ ಅಭಾವ ತಲೆದೂರಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಕಳೆದ ಒಂದೂವರೆ ತಿಂಗಳಿನಿಂದ ಜಿಲ್ಲೆಯಲ್ಲಿ ಮಳೆ ಬಂದಿಲ್ಲ. ಜನರಿಗೆ ಟ್ಯಾಂಕರ್ ನೀರು ಪೂರೈಸಲು ಕೂಡ ಎಲ್ಲಿಂದ ನೀರು ತರಬೇಕು ಎನ್ನುವುದು ಗೊತ್ತಾಗುತ್ತಿಲ್ಲ’ ಎಂದು ಅವರು ಹೇಳಿದರು.
ಇದನ್ನೆಲ್ಲ ಮನಗಂಡು, ಬಿಜೆಪಿ ಹಾಗೂ ಸಾರ್ವಜನಿಕರ ಪರವಾಗಿ ದೇವರಿಗೆ ವಿಶೇಷ ಸೇವೆ ನೀಡಿದ್ದೇವೆ. ಎರಡು– ಮೂರು ದಿನಗಳಲ್ಲೇ ಜಿಲ್ಲೆಯಲ್ಲಿ ಮಳೆಯಾಗಲಿ. ಬತ್ತಿರುವ ಜಲ ಮೂಲಗಳು ಜೀವ ಪಡೆದುಕೊಳ್ಳಲಿ ಎಂದು ಬೇಡಿಕೊಂಡಿದ್ದೇವೆ’ ಎಂದು ತಿಳಿಸಿದರು.ಈಗಾಗಲೇ ಕಡವಿನಕಟ್ಟೆ ಜಲಾಶಯದಲ್ಲಿ ಹೂಳೆತ್ತಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಟ್ಕಳದ ಎಲ್ಲ ಸಣ್ಣ, ದೊಡ್ಡ ನೀರಿನ ಮೂಲಗಳ ಹೂಳೆತ್ತುವ ಕಾರ್ಯಮಾಡಲಾಗುವುದು’ ಎಂದೂ ಅವರು ಈ ವೇಳೆ ತಿಳಿಸಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...