ವೈಯಕ್ತಿಕ ವೆಚ್ಚದಲ್ಲಿ ಲಗೇಜು ರಿಕ್ಷಾ ನಿಲ್ದಾಣ ನಿರ್ಮಿಸಿ ಕೊಟ್ಟ ಶಾಸಕ ಸುನೀಲ್ ನಾಯ್ಕ

Source: sonews | By MV Bhatkal | Published on 9th October 2021, 7:03 PM | Coastal News | Don't Miss |

ಭಟ್ಕಳ:ತಾಲೂಕಿನ ಹೆಬಳೆಯಲ್ಲಿ ಲಗೇಜು ರಿಕ್ಷಾ ಚಾಲಕರ ರಿಕ್ಷಾ ಸ್ಟ್ಯಾಂಡ್ ಮತ್ತು ವಿಶ್ರಾಂತಿ ಕೊಠಡಿಯನ್ನು ಭಟ್ಕಳ ಶಾಸಕ ಸುನೀಲ್ ನಾಯ್ಕ್ ಉದ್ಘಾಟಿಸಿದರು.
ಕೇಲವು ದಿನಗಳಿಂದ ಹೆಬಳೆ ಬಾಗದ ಲಗೇಜು ರಿಕ್ಷಾ ಸಂಘದ ಸದಸ್ಯರು ರಿಕ್ಷಾ ಸ್ಟ್ಯಾಂಡ್ ಸರಿಪಡಿಸಲು ಶಾಸಕ ರಲ್ಲಿ ಬೇಡಿಕೆ ಇಟ್ಟಿದ್ದರು ಶಾಸಕರು ಅಲ್ಪಾವಧಿಯಲ್ಲಿ ತಮ್ಮ ವೈಯಕ್ತಿಕ ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ
ಚಾಲಕರು ಅಪೇಕ್ಷೆಯಂತೆ ನಿರ್ಮಾಣ ಮಾಡಿ ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಲಗೇಜು ರಿಕ್ಷಾ ಸಂಘದ ಸದಸ್ಯರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.ಕಾರ್ಯಕ್ರಮದಲ್ಲಿ ಭಟ್ಕಳ ಬಿಜೆಪಿ ಮಂಡಲದ ಅಧ್ಯಕ್ಷ ಸುಬ್ರಾಯ ದೇವಡಿಗ,ಮುಠ್ಠಳ್ಳಿ ಪಂಚಾಯತ ಅಧ್ಯಕ್ಷ ಶೇಷಗಿರಿ ನಾಯ್ಕ ಸೇರಿದಂತೆ 
ಲಗೇಜು ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...