ಕಾರವಾರ: ಕ್ರಿಮ್ಸ್ ನಲ್ಲಿ ಸೂಪರ್ ಸ್ಪಷಾಲಿಟಿ ವ್ಯವಸ್ಥೆ: ಸಚಿವ ಮಂಕಾಳ ವೈದ್ಯ

Source: S O News | By I.G. Bhatkali | Published on 8th November 2023, 10:53 PM | Coastal News |

ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರೋಗಿಗಳಿಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಎಷ್ಟೇ ಹಣ ವೆಚ್ಚವಾದರೂ ಅದಕ್ಕೆ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.

ಅವರು ಇಂದ ಕಾರವಾರದ ಕ್ರಿಮ್ಸ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನು ಸಾರ್ವಜನಿಕರ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಇದಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದ್ದು, ಕ್ರಿಮ್ಸ್ ನಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಸೌಲಭ್ಯ ನೀಡಲು ಯೋಜಿಸಿದೆ.  ಈಗಾಗಲೇ ಅತ್ಯಾಧುನಿಕ ಎಂಆರ್‍ಐ ಸ್ಕ್ಯಾನಿಂಗ್ ಯಂತ್ರ ಅಳವಡಿಸಲು ಕ್ಯಾಬಿನೆಟ್ ಅನುಮೋದನೆ ದೊರಕಿದೆ ಎಂದರು.

ಇನ್ನು ಒಂದೆರೆಡು ತಿಂಗಳಲ್ಲಿ 450 ಹಾಸಿಗೆಗಳ ಕಟ್ಟಡ ನಿರ್ಮಾಣ ಶೀಘ್ರದಲ್ಲಿ ಮುಕ್ತಾಯಗೊಳ್ಳಲಿದ್ದು, ಟ್ರಾಮಾ ಕೇರ್ ಸೆಂಟರ್ ಕಟ್ಟಡ ಕೂಡಾ ಪ್ರತ್ಯೇಕವಾಗಿ ನಿರ್ಮಾಣವಾಗಲಿದೆ. ಇದಕ್ಕೆ ಬೇಕಾದ ಎಲ್ಲಾ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗುವುದು ಎಂದರು.

ಕ್ರಿಮ್ಸ್‍ನಲ್ಲಿನ ಕೆಲವು ಸಮಸ್ಯೆಗಳಿಂದ ಸಾರ್ವಜನಿಕರು ಆಸ್ಪತ್ರೆಗೆ ಆಗಮಿಸಲು ಯೋಚಿಸುವಂತಾಗಿದೆ , ಮಂಗಳೂರು ಅಥವಾ ಬೇರೆ ಆಸ್ಪತ್ರೆಗಳಿಗೆ ತೆರಳುತ್ತಾರೆ. ಆಶಾ ಕಿರಣ ಯೋಜನೆಯಡಿ ಸರ್ಕಾರ 29.14 ಕೋಟಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ 4 ಜಿಲ್ಲೆಗಳಲ್ಲಿನ ಸಾರ್ವಜನಿಕರ ಕಣ್ಣಿನ ತಪಾಸಣೆ ನಡೆಸಿ, ಕನ್ನಡಕ ನೀಡುವ ಯೋಜನೆ ಇದಾಗಿದ್ದು, ಕ್ರಿಮ್ಸ್ ವೈದ್ಯರು ಈ ಯೋಜನೆಗೆ ಅಗತ್ಯ ಸಹಕಾರ ನೀಡಬೇಕು ಎಂದರು.

ಆಸ್ಪತ್ರೆಯ ವಿವಿಧ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸಿದ ಸಚಿವರು, ಅಧಿಕಾರಿಗಳು ಮತ್ತು ವೈದ್ಯರು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದರು.
ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಕ್ರಿಮ್ಸ್ ನಿರ್ದೇಶಕ ಡಾ.ಗಜಾನನ ನಾಯಕ,ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತಲಕರ್ ಮತ್ತಿತರರು ಉಪಸ್ಥಿತರಿದ್ದರು.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...