ಶಿವಮೊಗ್ಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Source: SO News | By Laxmi Tanaya | Published on 20th September 2020, 6:51 AM | State News | Don't Miss |

ಶಿವಮೊಗ್ಗ :  ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ಹೊಸ ರೈಲು ಸಂಪರ್ಕ ಮತ್ತು ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ಅನುಷ್ಟಾನಗೊಳ್ಳುತ್ತಿದ್ದು, ಹೊಸದಾಗಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕವಾದ ವಾತಾವರಣವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಶನಿವಾರ ಮಾಚೇನಹಳ್ಳಿಯಲ್ಲಿ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಕಾರ್ಯಕ್ರಮ ಹಾಗೂ ಇತ್ತೀಚಿನ ಕಾರ್ಮಿಕ ಕಾನೂನು ತಿದ್ದುಪಡಿಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಉದ್ದಿಮೆಗಳನ್ನು ಆರಂಭಿಸಲು ರಸ್ತೆ ಸಂಪರ್ಕ, ವಿದ್ಯುತ್, ನೀರು ಪೂರೈಕೆಯಂತಹ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ, ಪ್ರತ್ಯೇಕ ವಿದ್ಯುತ್ ಸಬ್‍ಸ್ಟೇಷನ್ ನಿರ್ಮಾಣ ಇತ್ಯಾದಿ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು. ಕೃಷಿ ಆಧಾರಿತ ಕೈಗಾರಿಕೆಗಳು ಸೇರಿದಂತೆ ಹಲವು ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಜಿಲ್ಲೆಯಲ್ಲಿ ಉತ್ತಮ ಅವಕಾಶಗಳಿವೆ. ಕೋವಿಡ್ ಸಂದರ್ಭದಲ್ಲಿ ಬೇರೆ ನಗರಗಳಿಂದ ಜಿಲ್ಲೆಗೆ ವಾಪಾಸು ಬಂದಿರುವ ಪ್ರತಿಭಾವಂತರು ಕೈಗಾರಿಕೆ ಆರಂಭಿಸುವ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಅಂತಹವರಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಬಂಡವಾಳ ಹೂಡಿಕೆ ಮಾಡಲು ಉತ್ತಮ ಅವಕಾಶಗಳಿವೆ. ಉತ್ತಮ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರೆ ಹೂಡಿಕೆದಾರರು ಧೈರ್ಯದಿಂದ ಬಂಡವಾಳ ತೊಡಗಿಸಲು ಮುಂದೆ ಬರುತ್ತಾರೆ. ಅಂತಹ ಹೊಸ ಹೂಡಿಕೆದಾರರನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕಿದೆ. ತೀರ್ಥಹಳ್ಳಿ ಭಾಗದಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಆರಂಭಿಸಿದರೆ ಆ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಬಹುದಾಗಿದೆ. ಶಿವಮೊಗ್ಗ ನಗರದಲ್ಲಿ ಹೊಸ ವಿಮಾನ ನಿಲ್ದಾಣ ಪ್ರಾರಂಭವಾಗಲಿದ್ದು, ಕೈಗಾರಿಕಾ ಜಿಲ್ಲೆಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿವೆ ಎಂದು ಹೇಳಿದರು.

ಕರ್ನಾಟಕ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಅವರು ಮಾತನಾಡಿ, ಸರ್ಕಾರ ಹೊಸದಾಗಿ ಘೋಷಿಸಿರುವ ಕೈಗಾರಿಕಾ ನೀತಿ ಕೈಗಾರಿಕೆಗಳಿಗೆ ಪೂರಕವಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣವಿದ್ದು, ಇದರ ಗರಿಷ್ಟ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ನಿಗಮದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಅವರು ಮಾತನಾಡಿದರು. ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಎ.ರಮೇಶ ಹೆಗ್ಗಡೆ, ಶಿವಮೊಗ್ಗ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಮಂಡಳದ ಅಧ್ಯಕ್ಷ ಜೆ.ಆರ್.ವಾಸುದೇವ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...