ದೇಶದ್ರೋಹ ಕಾನೂನು ಪ್ರಶ್ನಿಸಿ ಅರ್ಜಿ ಪರಿಶೀಲನೆಗೆ ಸುಪ್ರೀಂ ಸಮ್ಮತಿ

Source: VB news | By I.G. Bhatkali | Published on 16th July 2021, 4:26 PM | National News |

ಹೊಸದಿಲ್ಲಿ: ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಿವೃತ್ತ ಸೇನಾಧಿಕಾರಿ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್ ನ್ಯಾಯಪೀಠ ಬುಧವಾರ ಸಮ್ಮತಿಸಿದೆ ಎಂದು ವರದಿಯಾಗಿದೆ.

ಐಪಿಸಿ ಸೆಕ್ಷನ್ 124-ಎಯಡಿ ಬರುವ ದೇಶದ್ರೋಹ ಕಾನೂನು ಅಸಾಂವಿಧಾನಿಕವಾಗಿದ್ದು ಮೂಲಭೂತ ಹಕ್ಕುಗಳಾದ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತ ಸ್ವಾತಂತ್ರ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಆದ್ದರಿಂದ ಇದನ್ನು ತಕ್ಷಣ ರದ್ದುಗೊಳಿಸಬೇಕು ಎಂದು ನಿವೃತ್ತ ಮೇಜರ್‌ ಜನರಲ್‌ ಎಸ್‌ಜಿ ವೊಂಬತ್‌ಕೆರೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಪರಿಶೀಲಿಸಲು ಸಮ್ಮತಿಸಿದ ನ್ಯಾಯಪೀಠ, ಅರ್ಜಿಯ ಪ್ರತಿಯನ್ನು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್‌ಗೆ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.

ಇದಕ್ಕೂ ಮುನ್ನ, ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಪತ್ರಕರ್ತರಾದ ಕಿಶೋರ್‌ಚಂದ್ರ ವಾಂಗ್‌ಮ್ಮ ಮತ್ತು ಕನ್ನಯ ಲಾಲ್ ಶುಕ್ಲ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ನ ಪ್ರತ್ಯೇಕ ಪೀಠ, ಈ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ

ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ...