ಸುಪ್ರೀಂ ಕೋರ್ಟ್ ಜಾಮೀನು: ತಿಹಾರ್‌ ಜೈಲಿನಿಂದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಜುಬೇರ್ ಬಿಡುಗಡೆ!

Source: PTI | By MV Bhatkal | Published on 22nd July 2022, 12:39 AM | National News |

ನವದೆಹಲಿ: ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳಲ್ಲೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಗಂಟೆಗಳ ನಂತರ ತಿಹಾರ್‌ನಿಂದ ಬಿಡುಗಡೆಗೊಂಡಿದ್ದಾರೆ ಎಂದು ಜೈಲು ಅಧಿಕಾರಿಗಳು  ತಿಳಿಸಿದ್ದಾರೆ.

ಟ್ವೀಟ್‌ಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27ರಂದು ದೆಹಲಿ ಪೊಲೀಸರು ಜುಬೇರ್ ಅವರನ್ನು ಬಂಧಿಸಿದ್ದರು.
ಉತ್ತರಪ್ರದೇಶದಲ್ಲಿ ಜುಬೈರ್ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು ಹತ್ರಾಸ್‌ನಲ್ಲಿ ಎರಡು ಮತ್ತು ಸೀತಾಪುರ್, ಲಖಿಂಪುರ ಖೇರಿ, ಮುಜಾಫರ್‌ನಗರ, ಘಾಜಿಯಾಬಾದ್ ಮತ್ತು ಚಂದೌಲಿ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ
ಜುಬೈರ್‌ನನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್  ಆದೇಶ ನೀಡಿತು. ಅಲ್ಲದೆ ಉತ್ತರಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿದೆ.
ನ್ಯಾಯಾಲಯವು ಜುಬೈರ್ ಸ್ವಾತಂತ್ರ್ಯದ ಹರಣಕ್ಕೆ ಯಾವುದೇ ಕಾರಣ ಅಥವಾ ಸಮರ್ಥನೆಯನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿತು. ಅಲ್ಲದೆ ಯುಪಿ ಪೋಲಿಸ್ ರಚಿಸಿದ್ದ ಎಸ್‌ಐಟಿಯನ್ನು ವಿಸರ್ಜಿಸುವಂತೆ ಆದೇಶಿಸಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...