ಆರ್‌ಟಿಐ ನಿಯಮದ ಸೂಕ್ತ ಜಾರಿಯನ್ನು ಖಾತರಿಪಡಿಸಿ; ಸುಪ್ರೀಂ ಕೋರ್ಟ್

Source: Vb | By I.G. Bhatkali | Published on 21st August 2023, 8:43 AM | National News |

ಹೊಸದಿಲ್ಲಿ: ಸಾರ್ವಜನಿಕ ಅಧಿಕಾರಿಗಳು ಮಾಹಿತಿಯನ್ನು ಕ್ರಿಯಾತ್ಮಕವಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ -2005ರ ನಿಯಮಗಳ ಸೂಕ್ತ ಜಾರಿಗೆ ಖಾತರಿ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮಾಹಿತಿ ಆಯೋಗ ಹಾಗೂ ರಾಜ್ಯ ಮಾಹಿತಿ ಆಯೋಗಗಳಿಗೆ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಮೂವರು ಸದಸ್ಯರ ಪೀಠ, “ಅಧಿಕಾರಿಗಳು' ಹಾಗೂ 'ಮಾಹಿತಿ ಹಕ್ಕುದಾರರು' ನಡುವಿನ ಸಂಬಂಧವನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಉತ್ತರದಾಯಿತ್ವ ನಿರ್ಣಾಯಕ ಲಕ್ಷಣವಾಗಿದೆ ಎಂದಿದೆ. ಅಧಿಕಾರ ಹಾಗೂ ಉತ್ತರದಾಯಿತ್ವ ಜೊತೆ ಜೊತೆಯಲ್ಲಿ ಸಾಗುತ್ತದೆ. ಎಲ್ಲಾ ಪ್ರಜೆಗಳು ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಮಾಹಿತಿ ಪಡೆಯುವ ಹಕ್ಕು ಹೊಂದಿದ್ದಾರೆ. ಸಾರ್ವಜನಿಕ ಸಂಸ್ಥೆಗಳು ಅದನ್ನು ಒದಗಿಸುವ ಬಾಧ್ಯತೆ ಹೊಂದಿವೆ જે ಎಂದು ಸುಪ್ರೀಂ ಕೋರ್ಟ್ ಹೇಳಿತು.

“ಆರ್‌ಟಿಐ ಕಾಯ್ದೆಯ ನಾಲ್ಕನೇ ಪರಿಚ್ಛೇದದಲ್ಲಿ ನೀಡಲಾಗಿರುವ ಸೂಚನೆಗಳ ಜಾರಿಯ ಬಗ್ಗೆ ಕೇಂದ್ರ ಮಾಹಿತಿ ಆಯೋಗ ಹಾಗೂ ರಾಜ್ಯ ಮಾಹಿತಿ ಆಯೋಗಗಳು ನಿರಂತರವಾಗಿ ಕಣ್ಣಾವಲು ಇರಿಸಬೇಕು ಎಂದು ನಾವು ನಿರ್ದೇಶನ ನೀಡುತ್ತೇವೆ. ಹಾಗೆಯೇ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಕಾಲಕಾಲಕ್ಕೆ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳು ಇದನ್ನೇ ಹೇಳುತ್ತವೆ'' ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಿಸಿತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...