ಡಿಕೆಶಿ ವಿರುದ್ಧದ ಈ.ಡಿ. ಪ್ರಕರಣ ರದ್ದುಗೊಳಿಸಿದ ಸುಪ್ರೀಂ; ಚುನಾವಣೆಯ ಹೊಸ್ತಿಲಲ್ಲಿ ಸಿಕ್ಕಿತು ಬಿಗ್ ರಿಲೀಫ್

Source: Vb | By I.G. Bhatkali | Published on 6th March 2024, 8:16 AM | State News | National News |

ಹೊಸದಿಲ್ಲಿ: ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಈ.ಡಿ.)ವು ಅವರ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ರದ್ದುಗೊಳಿಸಿದೆ.

ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಈ.ಡಿ.ತನಗೆ ನೀಡಿದ್ದ ಸಮನ್ಸನ್ನು ರದ್ದುಗೊಳಿಸಲು ನಿರಾಕರಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಈ.ಡಿ.ಪ್ರಕರಣವನ್ನು ರದ್ದುಗೊಳಿಸುವ ಮೂಲಕ ಶಿವಕುಮಾ‌ರ್ ಅವರಿಗೆ ನಿರಾಳತೆಯನ್ನು ಒದಗಿಸಿದೆ. ಪ್ರಕರಣ 2017,ಆಗಸ್ಟ್‌ನಷ್ಟು ಹಿಂದಿನದಾಗಿದೆ. ಶಿವಕುಮಾರ್, ಅವರ ಉದ್ಯಮ ಸಹವರ್ತಿಯೆನ್ನಲಾದ ಮದ್ಯದ ವ್ಯಾಪಾರಿ ಸಚಿನ್ ನಾರಾಯಣ(45) ಮತ್ತು ಇನ್ನೋರ್ವ ಸಹವರ್ತಿ ಐಷಾರಾಮಿ ಬಸ್ ಗಳ ಒಡೆಯ ಸುನೀಲ್‌ಕುಮಾ‌ರ್ ಶರ್ಮಾ(46), ದಿಲ್ಲಿಯ ಕರ್ನಾಟಕ ಭವನದ ಉದ್ಯೋಗಿ ಎ.ಹನುಮಂತಯ್ಯ (49) ಮತ್ತು ಕರ್ನಾಟಕ ಭವನದಲ್ಲಿ ಕೇರ್ ಟೇಕರ್ ಆಗಿ ನಿಯೋಜಿತರಾಗಿದ್ದ ಮಾಜಿ ರಾಜ್ಯ ಸರಕಾರಿ ನೌಕರ ರಾಜೇಂದ್ರ ಎನ್. (79) ಅವರ ವಿರುದ್ಧ ತೆರಿಗೆ ವಂಚನೆ ಆರೋಪದ ತನಿಖೆಯ ಅಂಗವಾಗಿ ಆದಾಯ ತೆರಿಗೆ ಇಲಾಖೆಯು ದಿಲ್ಲಿಯ ಹಲವಾರು ಕಡೆಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು.

ಈ ಸಂದರ್ಭ ಆದಾಯ ತೆರಿಗೆ ಇಲಾಖೆಯು 8.59 ಕೋ. .ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿತ್ತು. ಈ ಹಣ ತಮ್ಮ ಕೃಷಿ ಆದಾಯ ಮತ್ತು ಉದ್ಯಮ ಆದಾಯವಾಗಿದೆ ಎಂದು ಅನುಕ್ರಮವಾಗಿ ಶಿವಕುಮಾ‌ರ್ ಮತ್ತು ಶರ್ಮಾ ಪ್ರತಿಪಾದಿಸಿದ ಬಳಿಕ ಈಗ 41 ಲ.ಗೂ ಅಧಿಕ ಹಣವನ್ನು ಶಿವಕುಮಾರ್ ಅವರಿಂದ ಮತ್ತು 7.58 ಲ.ಕ್ಕೂ ಅಧಿಕ ಹಣವನ್ನು ಶರ್ಮಾ ಅವರಿಂದ ಬರಬೇಕಿದ್ದ ತೆರಿಗೆ ಬಾಕಿಗಳಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಬಳಿಕ ಆದಾಯ ತೆರಿಗೆ ಇಲಾಖೆಯು ಎಲ್ಲ ಆರೋಪಿಗಳ ವಿರುದ್ದ ತೆರಿಗೆ ವಂಚನೆ ಆರೋಪಗಳಲ್ಲಿ ಬೆಂಗಳೂರಿನ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತ್ತು. ಇದರ ಆಧಾರದಲ್ಲಿ ಈ.ಡಿ.2018ರಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...