ಬಿಬಿಸಿ ನಿಷೇಧಿಸುವಂತೆ ಕೋರುವ ಅರ್ಜಿ ವಜಾಗೊಳಿಸಿದ ಸುಪ್ರೀಂ

Source: Vb | By I.G. Bhatkali | Published on 11th February 2023, 2:45 PM | National News |

ಹೊಸದಿಲ್ಲಿ: 2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದಾರೆನ್ನಲಾದ ಪಾತ್ರದ ಬಗ್ಗೆ ಸಾಕ್ಷ್ಯಚಿತ್ರವೊಂದನ್ನು ನಿರ್ಮಿಸಿರುವುದಕ್ಕಾಗಿ ಬಿಬಿಸಿಯನ್ನು ಭಾರತದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರುವ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಹಿಂದೂ ಸೇನಾ ಎಂಬ ಸಂಘಟನೆಯು ಸಲ್ಲಿಸಿರುವ ಅರ್ಜಿಯು ತಪ್ಪು ಕಲ್ಪ ನೆಯಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಮ್.ಎಮ್. ಸುಂದರೇಶ್ ಅವರನ್ನೊಳಗೊಂಡ ನ್ಯಾಯಪೀಠವು, ನ್ಯಾಯಾಲಯವು ಸೆನ್ಸಾರ್‌ಶಿಪ್ ವಿಧಿಸುವಂತಿಲ್ಲ ಎಂದು ಹೇಳಿದೆ.

“ಇದು ಸಂಪೂರ್ಣ ತಪ್ಪು ಕಲ್ಪ ನೆಯಿಂದ ಕೂಡಿದೆ. ಈ ಬಗ್ಗೆ ವಾದವಾದರೂ ಹೇಗೆ ಮಾಡುತ್ತೀರಿ?” ಎಂದು ನ್ಯಾಯಾಲಯ ಕೇಳಿತು. “ನಾವು ಸಂಪೂರ್ಣ ಸೆನ್ಸಾರ್‌ಪ್ ವಿಧಿಸಬೇಕೆಂದು ನೀವು ಬಯಸುತ್ತೀರಿ... ಏನು ಕತೆ?” ಎಂದು ಅದು ಹೇಳಿತು.

Read These Next

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ

ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ...

ಕೇಜ್ರವಾಲ್‌ಗೆ ಜೂ.1ರವರೆಗೆ ಮಧ್ಯಂತರ ಜಾಮೀನು; ಮುಖ್ಯಮಂತ್ರಿ ಕಚೇರಿಗೆ ಹೋಗಬಾರದು: ಸುಪ್ರೀಂ ಕೋರ್ಟ್

ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...