ಝುಬೈರ್‌ಗೆ ಜಾಮೀನು; ನಾಗರಿಕ ಧ್ವನಿಯ ದಮನ ಸಲ್ಲ; ಸುಪ್ರೀಂ ಕೋರ್ಟ್

Source: Vb | By I.G. Bhatkali | Published on 21st July 2022, 10:03 AM | National News | Don't Miss |

ಮುಹಮ್ಮದ್ ಝುಬೈರ್ ಅವರು ಟ್ವಿಟ್ ಮಾಡುವುದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಉತ್ತರಪ್ರದೇಶ ಸರಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, “ಇದು ನ್ಯಾಯವಾದಿಗಳು ವಾದ ಮಾಡಬಾರದು ಎಂದು ಹೇಳಿದಂತೆ, ಪತ್ರಕರ್ತರು ಬರೆಯಬಾರದು ಎಂದು ಹೇಳಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

“ಅವರು ಕಾನೂನು ಉಲ್ಲಂಘಿಸಿದರೆ ಉತ್ತರದಾಯಿಯಾಗುತ್ತಾರೆ. ಆದರೆ, ನಾಗರಿಕ ಧ್ವನಿ ಎತ್ತುವ ಸಂದರ್ಭ ಆತನ ವಿರುದ್ಧ ನಾವು ಮೊದಲೇ ಕ್ರಮಗಳನ್ನು ತೆಗೆದುಕೊಳ್ಳುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಅವರನ್ನು ದಿಲ್ಲಿ ಪೊಲೀಸರು ವಿಸ್ಸತ ತನಿಖೆಗೆ ಒಳಪಡಿಸಿರುವುದನ್ನು ನಾವು ಕಂಡುಕೊಂಡಿದ್ದೇವೆ. ಆದುದರಿಂದ ಅವರ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು ૨ ಎಂಬುದು ಕಾನೂನಿನ ಸ್ಥಾಪಿತ ತತ್ವವಾಗಿದೆ. ಈ ಪ್ರಕರಣದಲ್ಲಿ ಅವರನ್ನು ನಿರಂತರ ಬಂಧನದಲ್ಲಿ ಇರಿಸಲು ಯಾವುದೇ ಸಮರ್ಥನೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...