ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ; ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

Source: Vb | By I.G. Bhatkali | Published on 18th December 2022, 8:51 PM | National News |

ಹೊಸದಿಲ್ಲಿ: ತನ್ನ ಮೊದಲಿನ ಆದೇಶವನ್ನು ಮರುಪರಿಶೀಲಿಸಬೇಕೆಂದು ಕೋರಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಬಿಲ್ಕಿಸ್ ಬಾನು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಮ್ಮ ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ದೋಷಿಗಳು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ ಗುಜರಾತ್ ಸರಕಾರಕ್ಕೆ ಸೂಚಿಸಿತ್ತು.

2002ರ ಗುಜರಾತ್ ಗಲಭೆ ಸಂದರ್ಭ ದಲ್ಲಿ, ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹಾಗೂ ಅವರ ಕುಟುಂಬದ ಏಳು ಮಂದಿಯನ್ನು ಕೊಲೆ ಗೈದ ಆರೋಪವನ್ನು ದೋಷಿಗಳು ಎದುರಿಸು ತ್ತಿದ್ದರು.

ನಿಯಮಗಳ ಪ್ರಕಾರ, ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮರು ಪರಿಶೀಲನೆ ಕೋರಿ ಸಲ್ಲಿಕೆ ಯಾಗುವ ಅರ್ಜಿಗಳ ವಿಚಾರಣೆಯನ್ನು ಆ ತೀರ್ಪುಗಳನ್ನು ನೀಡಿರುವ ನ್ಯಾಯಾಧೀಶರೇ ತಮ್ಮ ಕೋಣೆಗಳಲ್ಲಿ ನಡೆಸುತ್ತಾರೆ. ಅದರಂತೆ, ಬಿಲ್ಕಿಸ್ ಬಾನು ಅವರ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 13ರಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರನ್ನೊಳ ಗೊಂಡ ನ್ಯಾಯ ಪೀಠವು ನಡೆಸಿತ್ತು.

'ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿ ರುವ, ಮೇಲಿನ ವಿಷಯಕ್ಕೆ ಸಂಬಂಧಿಸಿದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 13ರಂದು ತಿರಸ್ಕರಿಸಿದೆ ಎನ್ನುವುದನ್ನು ತಿಳಿಸಲು ನನಗೆ ಸೂಚಿಸಲಾಗಿದೆ' ಎಂಬುದಾಗಿ ಬಿಲ್ಕಿಸ್ ಬಾನು ಅವರ ಪರ ನ್ಯಾಯವಾದಿ ಶೋಭಾ ಗುಪ್ತಾರಿಗೆ ನ್ಯಾಯಾಲಯದ ಸಹಾಯಕ ರಿಜಿಸ್ಟ್ರಾರ್ ಶನಿವಾರ ಕಳುಹಿಸಿರುವ ಪತ್ರವೊಂದು ತಿಳಿಸಿದೆ.

ಪ್ರಕರಣದ ಓರ್ವ ದೋಷಿಯು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮೇ 13ರಂದು ತನ್ನ ತೀರ್ಪು ನೀಡಿತ್ತು.

ತಮ್ಮನ್ನು ಅವಧಿಗೆ ಮುಂಚಿತವಾಗಿ ಬಿಡುಗಡೆಗೊಳಿಸಬೇಕೆನ್ನುವ ದೋಷಿಗಳ ಅರ್ಜಿಯನ್ನು, ಶಿಕ್ಷೆ ರದ್ದತಿಗೆ ಸಂಬಂಧಿಸಿದ ಗುಜರಾತ್ ರಾಜ್ಯ ಸರಕಾರದ1992 ಜುಲೈ 9ರನಿಯಮಗಳಿಗೆ ಅನುಗುಣವಾಗಿ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ ಮೇ 13ರ ತನ್ನ ತೀರ್ಪಿನಲ್ಲಿ ಗುಜರಾತ್ ಸರಕಾರಕ್ಕೆ ಸೂಚನೆ ನೀಡಿತ್ತು. ಈ ಕುರಿತ ನಿರ್ಧಾರವನ್ನು ಎರಡು ತಿಂಗಳೊಳಗೆ ತೆಗೆದುಕೊಳ್ಳುವಂತೆಯೂ ನ್ಯಾಯಾಲಯವು ರಾಜ್ಯಸರಕಾರಕ್ಕೆ ಸೂಚಿಸಿತ್ತು. ಅದರಂತೆ, ಗುಜರಾತ್ ಸರಕಾರವು ಆಗಸ್ಟ್ 15ರಂದು ಪ್ರಕರಣದ ಎಲ್ಲಾ 11 ದೋಷಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗದಿದ್ದರೆ ಜನರು ಇನ್ನೆಲ್ಲಿ ಹೋಗಬೇಕು?: ಸ್ವಾತಿ ಮಲಿವಾಲ್:  ಜನರಿಗೆ ಸುಪ್ರೀಂ ಕೋರ್ಟಿನಲ್ಲಿ ನ್ಯಾಯ ಸಿಗದಿದ್ದರೆ ಅವರು ಎಲ್ಲಿ ಹೋಗಬೇಕು ಎಂದು ದಿಲ್ಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು)ದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶನಿವಾರ ಪ್ರಶ್ನಿಸಿದ್ದಾರೆ.

ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹಾಗೂ ತನ್ನ ಕುಟುಂಬದ ಏಳು ಸದಸ್ಯರನ್ನು ಕೊಲೆಗೈದ 11 ದೋಷಿಗಳನ್ನು ಗುಜರಾತ್ ಸರಕಾರ ಜೈಲಿನಿಂದ ಬಿಡುಗಡೆಗೊಳಿಸಲು ಕಾರಣವಾದ ತೀರ್ಪೊಂದನ್ನು ಮರುಪರಿಶೀಲಿಸಬೇಕೆಂದು ಕೋರಿ ಬಿಲ್ಕಿಸ್ ಬಾನು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

“ಬಿಲ್ಕಿಸ್ ಬಾನು ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 21 ವರ್ಷದ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು ಹಾಗೂ ಅವರ ಮೂರು ವರ್ಷದ ಮಗ ಮತ್ತು ಆರು ಮಂದಿ ಕುಟುಂಬ ಸದಸ್ಯರನ್ನು ಕೊಲ್ಲಲಾಗಿತ್ತು. ಆದರೆ, ಗುಜರಾತ್ ಸರಕಾರ ಎಲ್ಲಾ ಅತ್ಯಾಚಾರಿಗಳು ಹಾಗೂ ಕೊಲೆಗಡುಕರನ್ನು ಬಿಡುಗಡೆಗೊಳಿಸಿದೆ. ಸುಪ್ರೀಂ ಕೋರ್ಟ್‌ ನಲ್ಲೇ ನ್ಯಾಯ ಸಿಗದಿದ್ದರೆ ಜನರು ಇನ್ನೆಲ್ಲಿ ಹೋಗಬೇಕು'' ಎಂದು ಮಲಿವಾಲ್‌ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...