ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

Source: Vb | By I.G. Bhatkali | Published on 17th April 2024, 11:12 AM | National News |

ಹೊಸದಿಲ್ಲಿ: ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ತನಗೆ ವರದಿಯನ್ನು ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ವಿವಿಧ ರಾಜ್ಯ ಸರಕಾರಗಳಿಗೆ ಸೂಚಿಸಿದೆ.

ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್ಎಫ್ ಐಡಬ್ಲ್ಯು) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶವನ್ನು ಹೊರಡಿಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಅರವಿಂದ ಕುಮಾ‌ರ್ ಮತ್ತು ಸಂದೀಪ್ ಮೆಹ್ರಾ ಅವರ ಪೀಠವು ವಿಚಾರಣೆಯನ್ನು ಆರು ವಾರಗಳ ನಂತರ ನಿಗದಿಗೊಳಿಸಿತು.

ಗೋರಕ್ಷಕರಿಂದ ಮುಸ್ಲಿಮರ ಥಳಿಸಿ ಹತ್ಯೆ ಮತ್ತು ಗುಂಪು ಹಿಂಸಾಚಾರದ ಘಟನೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸರ್ವೋಚ್ಚ ನ್ಯಾಯಾಲಯದ 2018ರ ತೀರ್ಪಿಗೆ ಅನುಗುಣವಾಗಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ವಿಚಾರಣೆ ಸಂದರ್ಭ ಎನ್ ಎಫ್‌ಐಡಬ್ಲ್ಯು ಪರ ವಕೀಲ ನಿಝಾಮ್ ಪಾಷಾ ಅವರು, ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ ಬಲಿಪಶುಗಳ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರಕಾರವು ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪೂನಾವಾಲಾ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಥಳಿಸಿ ಹತ್ಯೆ ಮತ್ತು ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ರಾಜ್ಯಗಳಿಗೆ ಹಲವಾರು ನಿರ್ದೇಶನಗಳನ್ನು ಹೊರಡಿಸಿತ್ತು.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್‌ಐಆರ್ ದಾಖಲಿಸಿದ್ದು ಹೇಗೆ ಮತ್ತು ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್‌ಐಆ‌ರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ ಎಂದು ಮಧ್ಯಪ್ರದೇಶದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯವು, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...