ಮೋದಿ' ಉಪನಾಮಕ್ಕೆ ಅವಮಾನ; ಮಾನ ನಷ್ಟ ಪ್ರಕರಣ; ರಾಹುಲ್ 'ದೋಷಿ' ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ; ಲೋಕಸಭಾ ಸದಸ್ಯತ್ವ ರದ್ದತಿಗೆ ಹಾದಿ ಸುಗಮ; ಚುನಾವಣೆಗೂ ಸ್ಪರ್ಧಿಸಬಹುದು

Source: Vb | By I.G. Bhatkali | Published on 6th August 2023, 11:07 AM | National News |

ಹೊಸದಿಲ್ಲಿ: 'ಮೋದಿ' ಉಪನಾಮಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸುವ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದ ಕೆಳ ನ್ಯಾಯಾಲಯವೊಂದರ ತೀರ್ಪಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕೆಳ ನ್ಯಾಯಾಲಯದ ತೀರ್ಪಿನ ಬೆನ್ನಿಗೇ ರಾಹುಲ್‌ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಲಾಗಿತ್ತು.

ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ರಾಹುಲ್‌ ಲೋಕಸಭಾ ಅನರ್ಹತೆ ರದ್ದತಿಗೆ ಹಾದಿ ಸುಗಮಗೊಂಡಂತಾ ಗಿದೆ ಹಾಗೂ ಅವರು ಮುಂದೆ ಚುನಾವಣೆಗಳಲ್ಲೂ ಸ್ಪರ್ಧಿ ಸಬಹುದಾಗಿದೆ. ಕೆಳ ನ್ಯಾಯಾಲಯದ ತೀರ್ಪಿಗೆ ತಡೆ ಯಾಜ್ಞೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪಿ.ಎಸ್. ನರಸಿಂಹ ಮತ್ತು ಪಿ.ವಿ. ಸಂಜಯ್‌ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ವಿಚಾರಣಾ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಿತು. ಮಾನನಷ್ಟ ಪ್ರಕರಣದಲ್ಲಿ, ರಾಹುಲ್ ಗಾಂಧಿಗೆ ಎರಡು ವರ್ಷಗಳ ಗರಿಷ್ಠ ಜೈಲು ಶಿಕ್ಷೆಯನ್ನು ವಿಧಿಸಿರುವುದಕ್ಕೆ ವಿಚಾರಣಾ ನ್ಯಾಯಾಲಯವು ಕಾರಣಗಳನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಭಾರತೀಯ ದಂಡ ಸಂಹಿತೆ (ಐಪಿಸಿ)ಯ 498 ಮತ್ತು 499 ಪರಿಚ್ಛೇದಗಳನ್ವಯ ಶಿಕ್ಷಾರ್ಹವಾಗಿರುವ ಅಪರಾಧಕ್ಕೆ ಗರಿಷ್ಠ ಎರಡು ವರ್ಷಗಳ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತು. ಗರಿಷ್ಠಶಿಕ್ಷೆಯನ್ನು ವಿಧಿಸಲಾಗಿದೆ ಎಂಬ ಕಾರಣಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆಯ ವಿಧಿಗಳಿಗೆ ಅನುಗುಣವಾಗಿ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲಾಯಿತು. ಒಂದು ವೇಳೆ, ಜೈಲು ಶಿಕ್ಷೆಯ ಅವಧಿ ಒಂದು ದಿನ ಕಡಿಮೆಯಿದ್ದರೂ ಜನತಾ ಪ್ರಾತಿನಿಧ್ಯ ಕಾಯ್ದೆ ಅನ್ವಯಿಸುತ್ತಿರಲಿಲ್ಲ. ವಿಚಾರಣಾ ನ್ಯಾಯಾಲಯದ ಆದೇಶದ ಪರಿಣಾಮಗಳು ವ್ಯಾಪಕವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ಅದು ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಅರ್ಜಿದಾರರ ಹಕ್ಕಿನ ಮೇಲೆ ಮಾತ್ರವಲ್ಲ, ಅವರನ್ನು ಆರಿಸಿದ ಮತದಾರರ ಮೇಲೆಯೂ ಪರಿಣಾಮ ಬೀರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಈ ಅಂಶಗಳನ್ನು ಮತ್ತು ಎರಡು ವರ್ಷಗಳ ಗರಿಷ್ಠ ಜೈಲು ಶಿಕ್ಷೆಯನ್ನು ವಿಧಿಸಿರುವುದಕ್ಕೆ ವಿಚಾರಣಾ ನ್ಯಾಯಾಧೀಶರು ಯಾವುದೇ ಕಾರಣ ನೀಡದಿರುವುದನ್ನು ಪರಿಗಣಿಸಿ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡುವುದು ಅಗತ್ಯವಾಗಿದೆ. ಅರ್ಜಿಯ ಕುರಿತ ವಿಚಾರಣೆ ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಅದೇ ವೇಳೆ,ಕಾಂಗ್ರೆಸ್ ನಾಯಕನ ಮಾತುಗಳು ಉತ್ತಮ ಅಭಿರುಚಿಯದ್ದಲ್ಲ' ಎಂಬುದಾಗಿಯೂ ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿತು. ಸಾರ್ವಜನಿಕ ಬದುಕಿನಲ್ಲಿರುವ ವ್ಯಕ್ತಿಯೋರ್ವ ಸಾರ್ವಜನಿಕ ಸಭೆಗಳಲ್ಲಿ ಆಡುವ ಮಾತುಗಳ ಬಗ್ಗೆ ಜಾಗರೂಕತೆಯಿಂದ ಇರಬೇಕು ಎಂಬ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ ಎಂದು ಅದು ಹೇಳಿತು.

ಎಲ್ಲಾ ಕಳ್ಳರು ಮೋದಿ ಎಂಬ ಉಪನಾಮವನ್ನೇ ಯಾಕೆ ಹೊಂದಿದ್ದಾರೆ?” ಎಂಬುದಾಗಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಲೋಕಸಭಾ ಚುನಾವಣೆಯ ಮುನ್ನ, 2019ರ ಎಪ್ರಿಲ್‌ನಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ಪ್ರಚಾರ ಭಾಷಣವೊಂದನ್ನು ಮಾಡಿದ ರಾಹುಲ್, ಈ ಮಾತುಗಳನ್ನು ಹೇಳಿದ್ದರು.

ರಾಹುಲ್ ಮಾತುಗಳಿಂದ ಮೋದಿ ಸಮುದಾಯಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ವರ್ಷದ ಮಾರ್ಚ್‌ನಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ದೋಷಿ ಎಂದು ಘೋಷಣೆಯಾದ ಮರುದಿನವೇ, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಅವರು ಲೋಕಸಭೆಯಲ್ಲಿ ಕೇರಳದ ವಯನಾಡ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ರಾಹುಲ್ ಗಾಂಧಿ ಈ ತೀರ್ಪನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಈ 3 ಪ್ರಶ್ನಿಸಿದರು. ಜುಲೈ 7ರಂದು ತೀರ್ಪು ನೀಡಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಅದೂ ಅಲ್ಲದೆ, ರಾಹುಲ್ ಗಾಂಧಿಯ ವಿರುದ್ಧ ಕೆಲವು ಕಟು ಮಾತುಗಳನ್ನೂ ಆಡಿತು. “ಆರೋಪಿಯ ಅಪರಾಧವು ನೈತಿಕ ಅಧಃಪತನದ ವಿಭಾಗದಲ್ಲಿ ಬರುತ್ತದೆ ಹಾಗೂ ರಾಜಕೀಯದಲ್ಲಿ ಪರಿಶುದ್ಧತೆಯನ್ನು ಹೊಂದುವುದು ಇಂದಿನ ಅಗತ್ಯವಾಗಿದೆ' ಎಂದು ಗುಜರಾತ್ ಹೈಕೋರ್ಟ್ ಹೇಳಿತು.

“ರಾಹುಲ್ ಗಾಂಧಿ ಕೋರಿರುವಂತೆ, ಕೆಳ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಲು ಕಾರಣಗಳೇ ಇಲ್ಲ' ಎಂದು ಹೇಳಿದ ಹೈಕೋರ್ಟ್, ಸೂರತ್ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...