ಸೂರತ್: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಅಗ್ನಿ ಅವಘಡ, 20 ವಿದ್ಯಾರ್ಥಿಗಳು ಸಾವು

Source: S.O. News Service | By I.G. Bhatkali | Published on 25th May 2019, 11:23 PM | National News |
ಸೂರತ್: ಗುಜರಾತ್ ನ ಸೂರತ್ ನಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 20 ವಿದ್ಯಾರ್ಥಿಗಳ ಮೃತಪಟ್ಟಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಇನ್ನು ಅಗ್ನಿ ಅವಘಡ ಸಂದರ್ಭದಲ್ಲಿ ಹಲವು ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಮೇಲಿಂದಲೇ ಕೆಳಗೆ ಧುಮುಕಿದ್ದಾರೆ. ಈ ವೇಳೆ ಕೆಳಗಡೆ ನಿಂತಿದ್ದ ಜನಸ್ತೋಮ ಅವರನ್ನು ಹೆಚ್ಚಿನ ಅಪಾಯವಾಗದಂತೆ ರಕ್ಷಿಸಿದೆ. ಆದರೂ ಕೆಳಗೆ ಬಿದ್ದವರ ಪೈಕಿ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿಗಳು ಕೆಳಗೆ ಹಾರುತ್ತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಕಟ್ಟಡದಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ. 

ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...