ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಶೋಯಿಕ್,ಮಿರಾಂಡಾ ನಾಲ್ಕು ದಿನಗಳ ಕಾಲ ಎನ್ ಸಿಬಿ ವಶಕ್ಕೆ

Source: ANI | Published on 5th September 2020, 11:58 PM | National News | Don't Miss |

 


ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ನಿನ್ನೆ ಸಂಜೆ ಬಂಧಿಸಿದ್ದ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ  ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ  ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು  ಸೆಪ್ಟೆಂಬರ್ 9ರವರೆಗೊ ನಾರ್ಕೋಟಿಕ್ಸ್  ಕಂಟ್ರೋಲ್ ಬ್ಯೂರೋ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಇದೇ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಕೈಜೆನ್ ಇಬ್ರಾಹಿನನ್ನು  14 ದಿನಗಳ ಕಾಲ ಜ್ಯುಡಿಷಿಯಲ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಹೋದರ ಶೋಯಿಕ್  ಪ್ರಮುಖ ಆರೋಪಿಯಾಗಿದ್ದು,ಇಬ್ಬರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಎನ್ ಡಿಪಿಎಸ್ ಕಾಯ್ದೆಯ ಸೆಕ್ಷನ್ 29, 28, 27 ಎ, 20 ಬಿ ಅಡಿಯಲ್ಲಿ ಶೋಯಿಕ್ ಮತ್ತು ಸ್ಯಾಮುಯೆಲ್ ಮಿರಾಂಡಾ ಅವರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಉಪ ನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...