ವಿಷಾಹಾರ ಸೇವನೆ: 130ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು, ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜ್ ಹಾಸ್ಟೆಲ್‌ನಲ್ಲಿ ಘಟನೆ

Source: Vb | By I.G. Bhatkali | Published on 7th February 2023, 9:46 AM | Coastal News | State News |

ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜಿಗೆ ಸೇರಿದ ಹೋಸ್ಟಲುಂದರಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡರೆನ್ನಾಲಾದ 130ಕ್ಕೂ ಅಧಿಕ ವಿದ್ಯಾರ್ಥಿನಿಯರನ್ನು ಸೋಮವಾರ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ದ.ಕ. ಜಿಲ್ಲೆ ಹಾಗೂ ಕೇರಳ ಮತ್ತಿತರ ಕಡೆಯ ವಿದ್ಯಾರ್ಥಿನಿಯರೂ ಅಸ್ವಸ್ಥಗೊಂಡಿದ್ದಾರೆ. ಕೆಲವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಕೆಲವರನ್ನು 'ಬೆಡ್'ಗಳ ಕೊರತೆಯಿಂದ ಹೊರವಲಯದ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ದಿನದಿಂದ ಕಲುಷಿತ ನೀರು ಮತ್ತು ಆಹಾರ ಸೇವಿಸಿದ ಬಳಿಕ ಆರೋಗ್ಯದ ಸಮಸ್ಯೆ ಕಾಡಿದೆ. ಕೆಲವರಿಗೆ ಹೊಟ್ಟೆನೋವು, ವಾಂತಿ, ಭೇದಿ ಆಗಿದ್ದು, ಸೋಮವಾರ ಮುಂಜಾವದಿಂದಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜೆಯ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಎಂದು ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿನಿಯರು ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣ ಇತರ ವಿದ್ಯಾರ್ಥಿಗಳು ಮತ್ತು ಪೋಷಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ರಾತ್ರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಸೋಮವಾರ ಮುಂಜಾವ ಸುಮಾರು 2 ಗಂಟೆಗೆ ಕೆಲವು ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ಭೇದಿ ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯೂ ಹೆಚ್ಚಾಯಿತು. ಅವರನ್ನೆಲ್ಲಾ ನಗರದ ಎಜೆ, ಕೆಎಂಸಿ, ಫಾದರ್ ಮುಲ್ಲರ್ ಸಹಿತ ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು' ಎಂದಿದ್ದಾರೆ.

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...