ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ : ಜುಲೈ 10 ರೊಳಗೆ ಮಾಹಿತಿ ನೀಡಿ

Source: S.O. News Service | By MV Bhatkal | Published on 3rd July 2019, 3:12 PM | Coastal News | Don't Miss |

ಉಡುಪಿ:ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಕೆ.ಎಂ.ಎಫ್ ಡೈರಿ ಕ್ರಾಸ್ ವರೆಗಿನ ರಸ್ತೆಯಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ ರೂಪಿಸಲು ನಿರ್ಧರಿಸಿದ್ದು, ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ, ನಗರಸಭೆ, ಮೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಗಳು ತಮ್ಮ ಅಗತ್ಯತೆಗಳ ಕುರಿತು ಜುಲೈ 10 ರ ಒಳಗೆ ಜಿಲ್ಲಾ ನಗರಾಭಿವೃದ್ದಿ ಕೋಶಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುಸ್ಥಿರ ಸಂಚಾರ ವ್ಯವಸ್ಥೆಗೆ ಯೋಜನೆ ರೂಪಿಸುವ ಮುನ್ನ, ಈ ಪ್ರದೇಶವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿ, ಯಾವ ಪ್ರದೇಶದಲ್ಲಿ, ಏನು ಅಗತ್ಯತೆ ಇದು ಎನ್ನುವುದನ್ನು ತಿಳಿದುಕೊಳ್ಳಬೇಕು, ಇಂಟರ್ ಲಾಕ್ ಅಳವಡಿಸಿ ಪಾದಚಾರಿಗಳಿಗೆ ಪುಟ್ಪಾತ್ ನಿರ್ಮಾಣ ಮಾಡಬೇಕು, ಎಂಐಟಿ ಬಳಿ ಬಸ್ ನಿಲ್ದಾಣದ ಬದಲು ಬಸ್ ಬೇ ವ್ಯವಸ್ಥೆ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಪುಟ್ ಪಾತ್ ನಲ್ಲಿ ವಾಹನಗಳ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ರೇಲಿಂಗ್ ನಿರ್ಮಾಣ ಮಾಡುವಂತೆ ಹಾಗೂ ಎಲ್ಲಾ ಇಲಾಖೆಗಳು ಸಲ್ಲಿಸುವ ಮಾಹಿತಿಯನ್ನು ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕಾರಿಗಳು ಪರಿಶೀಲಿಸುವಂತೆ ತಿಳಿಸಿದರು.
ಈ ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ಹೊಸ ತಂತ್ರಜ್ಞಾನದೊಂದಿಗೆ ಮುಂದಿನ ಭವಿಷ್ಯದ ದೃಷ್ಠಿಯಿಂದ ದೀರ್ಘಕಾಲೀನ ಮಾದರಿ ಯೋಜನೆಯನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಮಾಹೆಯ ಆರ್ಕಿಟೆಕ್ ವಿಭಾಗಕ್ಕೆ ನೀಡಿ, ಶೀಘ್ರದಲ್ಲಿ ನೀಲನಕ್ಷೆ ಸಿದ್ದಪಡಿಸುವಂತೆ ಹೆಪ್ಸಿಬಾ ರಾಣಿ ತಿಳಿಸಿದರು.
ಉಡುಪಿ ನಗರಸಭೆಯಿಂದ ಈ ಕಾರ್ಯಕ್ಕೆ ಸಂಬಂಧಪಟ್ಟಂತೆ ಅಗತ್ಯ ಅನುಮತಿಗಳನ್ನು ಹಾಗೂ ಸೂಕ್ತ ಸಹಕಾರವನ್ನು ಸಂಬಂದಪಟ್ಟ ಅಧಿಕಾರಿಗಳಿಗೆ ನೀಡುವಂತೆ ಹಾಗೂ ರಸ್ತೆ ಅಗಲೀಕರಣದಿಂದ ಸ್ಥಳಾಂತರ ಮಾಡುವ ವಿದ್ಯುತ್ ಕಂಬಗಳನ್ನು ಪ್ರಸ್ತುತ ಇರುವ ಗುತ್ತಿಗೆದಾರರಿಂದಲೇ ಮರು ನಿರ್ಮಾಣ ಮಾಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಮಣಿಪಾಲ ಆರ್ಕಿಟೆಕ್ ವಿಭಾಗದ ಮುಖ್ಯಸ್ಥೆ ದೀಪಿಕಾ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...