'ಸ್ವಚ್ಛ ಭಾರತ್'ಗೆ ಕೈ ಜೋಡಿಸಿದ ತಾಲೂಕಾಸ್ಪತ್ರೆ... ಇಂದಿನಿಂದಲೇ ಸ್ವಚ್ಛತಾ ಕಾರ್ಯ ಶುರು

Source: so news | By Staff Correspondent | Published on 23rd September 2019, 12:01 AM | Coastal News | Don't Miss |

ಭಟ್ಕಳ : ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಅಭಿಯಾನಕ್ಕೆ ಭಟ್ಕಳದ ತಾಲೂಕಾಸ್ಪತ್ರೆ ಕೈ ಜೋಡಿಸಿದ್ದು, ಇಂದಿನಿಂದ ಪ್ರತಿ ಭಾನುವಾರದಂದು ನಡೆಯುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ಹೌದು ಭಟ್ಕಳದ ತಾಲೂಕಾಸ್ಪತ್ರೆಗೆ ಬರುವ ರೋಗಿಗಳು ಆಸ್ಪತ್ರೆಯ ಸುತ್ತಮುತ್ತಲಿನ ಆವರಣ ನೋಡಿ ಮೂಗು ಮುರಿಯಬಾರದೆಂಬ ಕಾರಣಕ್ಕೆ ಆಸ್ಪತ್ರೆಯ ಆವರಣ ಸುಂದರವಾಗಿಟ್ಟುಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಸ್ವಚ್ಛ ಭಾರತ್ ಯೋಜನೆಗೆ ಇಲ್ಲಿನ ತಾಲೂಕಾಸ್ಪತ್ರೆ ಕೈ ಜೋಡಿಸಿದೆ.ತಾಲೂಕಾಸ್ಪತ್ರೆಯ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡಿರುವುದುಪ್ರತಿ ಭಾನುವಾರದಂದು ತಾಲೂಕಿನ ಕೆಲವೊಂದು ಸಂಘಟನೆಗಳ ಸಹಭಾಗಿತ್ವದಲ್ಲಿ ತಾಲೂಕಾಸ್ಪತ್ರೆಯ ಸುತ್ತ ಮುತ್ತಲಿನ ಆವರಣವನ್ನು ಸ್ವಚ್ಛತೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರ ಮೊದಲ ದಿನವಾದ ಇಂದು ಶೋಟೋಕಾನ್ ಕರಾಟೆ ಇನ್ಸ್​ಸ್ಟಿಟ್ಯೂಟ್ ಭಟ್ಕಳ ಇವರ ಸಹಭಾಗಿತ್ವದಲ್ಲಿ ತಾಲೂಕಾಸ್ಪತ್ರೆಯ ಗಾರ್ಡನ್ ಭಾಗವನ್ನು ಸ್ವಚ್ಛ ಮಾಡುವುದರ ಮೂಲಕ ಶ್ರಮದಾನವನ್ನು ಮಾಡಿದರು. ಇನ್ನು ಈ ಸಂದರ್ಭದಲ್ಲಿ ಶೋಟೋಕಾನ್ ಕರಾಟೆ ಇನ್ಸ್​ಸ್ಟಿಟ್ಯೂಟ್​ನ ಆರು ವರ್ಷದ ಚಿಕ್ಕ ಮಕ್ಕಳು ಸಹಾ ಶ್ರಮದಾನದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...