ಈಜು ಸ್ಪರ್ಧೆ; ಮುಹಮ್ಮದ್ ಅಶ್ಫಾಖ್ ಯುನಿವರ್ಸಿಟಿ ಬ್ಲೂ ಆಗಿ ನೇಮಕ

Source: sonews | By Staff Correspondent | Published on 17th October 2019, 6:18 PM | Coastal News | Sports News | Don't Miss |

ಭಟ್ಕಳ: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಪದವಿ ಮಹಾವಿದ್ಯಾಲಯ ವಾಣಿಜ್ಯ ವಿಭಾಗದ (ಬಿ.ಕಾಂ 3ನೆ ಸೆಮಿಸ್ಟರ್) ವಿದ್ಯಾರ್ಥಿ ಮುಹಮ್ಮದ್ ಅಶ್ಫಾಖ್ ಬಿನ್ ಮುಹಮ್ಮದ್ ಅಸ್ಲಮ್ ಈಜು ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಬ್ಲೂ ಆಗಿ ನೇಮಕ ಗೊಂಡಿದ್ದಾನೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಕ.ವಿ.ಧಾರವಾಡವು ಸೆ.23 ರಿಂದ 25 ವರೆಗೆ ಹುಬ್ಬಳ್ಳಿಯ ಫ್ಲಾಶ್ ಸ್ವಿಮ್ಮಿಂಗ ಪೂಲ್ ನಲ್ಲಿ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಅಂಜುಮನ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಅದರಲ್ಲಿ ಉತ್ತಮ ಸಾಧನೆಗೈದ ಮುಹಮ್ಮದ್ ಅಶ್ಫಾಖ್ ವಿಶ್ವವಿದ್ಯಾಲಯ ಬ್ಲೂ ಆಗಿ ನೇಮಕಗೊಳ್ಳುವುದರ ಮೂಲಕ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸುವ ಆರ್ಹತೆಯನ್ನು ಪಡೆದುಕೊಂಡಿದ್ದಾರೆ. ಪಂಜಾಬ್ ರಾಜ್ಯದ ಲವ್ಲಿ ಪ್ರೋಫೆಶನಲ್ ಯುನಿವರ್ಸಿಟಿ ಪಾಗ್ವಾರಾ(ಕಪುರ್ಥಾಲಾ ಜಿಲ್ಲೆ)ದಲ್ಲಿ ನವೆಂಬರ್ 1ರಿಂದ 4ರ ವರೆಗೆ ಜರಗುವ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾನೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದು ವಿದ್ಯಾರ್ಥಿಯ ಸಾಧನೆಗೆ ಆಡಳಿತ ಮಂಡಳಿ, ಪಾಂಶುಪಾಲರು ಹಾಗೂ ಸಿಬಂಧಿ ವರ್ಗ ಅಭಿನಂದಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...