ರಾಜ್ಯಸಭೆ ಸದಸ್ಯರಾಗಿ ದೇವೆಗೌಡರಿಂದ ಪ್ರಮಾಣ ಸ್ವೀಕಾರ

Source: sonews | By Staff Correspondent | Published on 20th September 2020, 5:50 PM | National News |

ಹೊಸದಿಲ್ಲಿ: ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ರವಿವಾರ ರಾಜ್ಯಸಭೆಯ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನಸೆಳೆದರು. ಗೌಡರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ದೇಶದಲ್ಲಿ ಹಿಂದಿ ಹೇರಿಕೆಯ ಗದ್ದಲದ ನಡುವೆ ದೇವೇಗೌಡರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು ಮಹತ್ವ ಪಡೆದಿದೆ.1996ರ ನಂತರ ಇದೇ ಮೊದಲ ಬಾರಿ ಜೆಡಿಎಸ್ ನಾಯಕರೊಬ್ಬರು ಮೇಲ್ಮನೆಗೆ ಸದಸ್ಯರಾಗಿ ಪ್ರವೇಶಿಸಿದಂತಾಗಿದೆ.

ರಾಜ್ಯಸಭೆಗೆ ಒಳ್ಳೆಯ ಸೇರ್ಪಡೆ ಎಂದು ರಾಜ್ಯಸಭೆ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬಣ್ಣಿಸಿದ್ದಾರೆ.

ಮಾಜಿ ಪ್ರಧಾನಿ ಹಾಗೂ ದೇಶದ ಅತ್ಯಂತ ಹಿರಿಯ ನಾಯಕರೊಬ್ಬರು ಸದನವನ್ನು ಪ್ರವೇಶಿಸಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...