ಜ.೧೦ ರಂದು ರಾಣಿ ಚೆನ್ನಭೈರಾದೇವಿ ಕೃತಿಯ ವಿಚಾರ ಸಂಕಿರಣ ಮತ್ತು ಪುಸ್ತಕ ಪ್ರದರ್ಶನ

Source: SOnews | By Staff Correspondent | Published on 9th January 2024, 5:42 PM | Coastal News | Don't Miss |

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಎ ವಿಭಾಗದಿಂದ ಜ. ೧೦ ರಂದು ಬುಧವಾರ ಬೆಳಗ್ಗೆ ೧೦ ಗಂಟೆಗೆ  ರಾಣಿ ಚೆನ್ನಭೈರಾದೇವಿ ಹಾಗೂ ಈ ಕೃತಿಯ ಕುರಿತ ವಿಚಾರ ಸಂಕಿರಣ, ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. 

ರಾಣಿ ಚೆನ್ನಭೈರಾದೇವಿ ಈ ಪ್ರಖ್ಯಾತ ಕೃತಿಯ ಕೃರ್ತು ಡಾ.ಗಜಾನನ ಶರ್ಮ ಹಾಗೂ ಇತಿಹಾಸಕಾರರಾದ ಖ್ಯಾತ ವಾಗ್ಮಿ ಸೋಂದಾ ಲಕ್ಷ್ಮೀಶ ಹೆಗಡೆ ಆಗಮಿಸಲಿದ್ದು, ಸಾಹಿತ್ಯಾಸಕ್ತರು, ಇತಿಹಾಸಕಾರರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದ್ದಾರೆ.  ಪುಸ್ತಕ ಪ್ರದರ್ಶನ-ಮಾರಾಟ, ವಸ್ತು ಪ್ರದರ್ಶನ ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ಲಭ್ಯವಿದ್ದು, ಸಾರ್ವಜನಿಕರು ಭೇಟಿ ನೀಡಿ, ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...