ಟಿ-20: ಸಾಂಪ್ರದಾಯಿಕ ಎದುರಾಳಿ ಆಸಿಸ್ ವಿರುದ್ಧ ಇಂಗ್ಲೆಂಡ್ ಗೆ ಎರಡು ರನ್ ರೋಚಕ ಜಯ

Source: PTI | Published on 5th September 2020, 11:48 PM | Sports News | Don't Miss |

 

ಸೌಥ್ಯಾಂಪ್ಟನ್: ಕೊನೆಯ ಗಳಿಗೆಯಲ್ಲಿ ಬಿಗುವಿನ ಬೌಲಿಂಗ್ ದಾಳಿ ಮೂಲಕ ಆಸಿಸ್ ದಾಂಡಿಗರನ್ನು ಕಟ್ಟಿಹಾಕಿದ ಇಂಗ್ಲೆಂಡ್ ತಂಡ ಮೂರು ಪಂದ್ಯಗಳ ಟಿ20 ಟೂರ್ನಿಯಲ್ಲಿ ರೋಚಕ ಜಯ ಸಾಧಿಸಿದೆ.
ಇಂಗ್ಲೆಂಡ್ ನ ಸೌಥ್ಯಾಂಪ್ಟನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ ವಿರುದ್ಧ ಆಂಗ್ಲ ಪಡೆ 2 ರನ್ ಗಳ ರೋಚಕ ಜಯ ಸಾಧಿಸಿದೆ.  ಇಂಗ್ಲೆಂಡ್ ನೀಡಿದ 163 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸಿಸ್ ದಾಂಡಿಗರು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ದಾಖಲಿಸಿದೆ.
ಕೊನೆಯ ಓವರ್ ಗಳಲ್ಲಿ ಬಿಗುವಿನ ದಾಳಿ ನಡೆಸಿದ ಬೌಲರ್ ಗಳ ನೆರವಿನಿಂದ ಆತಿಥೆಯ ಇಂಗ್ಲೆಂಡ್ ಮೊದಲ ಟಿ-20 ಪಂದ್ಯದಲ್ಲಿ ಎರಡು ರನ್ ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿತು.
ಡೇವಿಡ್ ಮಲನ್ (66 ರನ್) ಮತ್ತು ಜಾಸ್ ಬಟ್ಲರ್ (44 ರನ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ ಇಯಾನ್ ಮಾರ್ಗನ್ ಬಳಗ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 162 ರನ್ ಕಲೆ ಹಾಕಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸ್ಟೇಲಿಯಾ ತಂಡ  ಡೇವಿಡ್ ವಾರ್ನರ್ ಭರ್ಜರಿ ಅರ್ಧಶತಕದ ಹೊರತಾಗಿಯೂ, ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 160ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಕೇವಲ 2 ರನ್ ಗಳ ಅಂತರದಲ್ಲಿ ಇಂಗ್ಲೆಂಡ್ ಎದುರು ಮಂಡಿಯೂರಿತು.
ಇಂಗ್ಲೆಂಡ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಡೇವಿಡ್ ಮಲನ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

Read These Next

ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್

ಆಲ್‌ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ...

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಇಲ್ಲ. ನೈಟ್ ಕರ್ಪ್ಯೂ ಮುಂದುವರಿಕೆ. ಎಚ್ಚರ ತಪ್ಪದಂತೆ ಜನತೆಗೆ ಸರ್ಕಾರದ ಮನವಿ

ಬೆಂಗಳೂರು : ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿಧಿಸಿದ್ದ ವೀಕೆಂಡ್ ಕರ್ಪ್ಯೂವನ್ನ ರಾಜ್ಯ ಸರ್ಕಸರವರದ್ದು ಮಾಡಿದೆ.

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

ಶಿವಮೊಗ್ಗ : ತೀರ್ಥಹಳ್ಳಿಯ ಇಂದಿರಾನಗರ, ತಾಲೂಕಿನ ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ಅಬಕಾರಿ ಇಲಾಖೆಯ ಆಯುಕ್ತರು ಹಾಗೂ ...

ಕೋವಿಡ್ ತಜ್ಞರ ಸಮಿತಿ ಸಭೆ. ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ...