ಟಿ20 ಸರಣಿ: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಗೆಲುವು

Source: ANI | By MV Bhatkal | Published on 18th November 2021, 12:27 AM | Sports News | Don't Miss |

ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದ್ದು, ರೋಹಿತ್‌ ಪಡೆ 19.4 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆ.ಎಲ್‌.ರಾಹುಲ್‌ ಒಂದು ಸಿಕ್ಸರ್‌ ಹಾಗೂ ಬೌಂಡರಿಯೊಂದಿಗೆ 15 ರನ್‌ಗಳಿಸಿದ್ದ ರಾಹುಲ್‌ ಆರನೇ ಓವರ್‌ ಮೊದಲ ಎಸೆತದಲ್ಲಿ ಸ್ಯಾಂಟ್ನರ್‌ಗೆ ವಿಕೆಟ್‌ ಒಪ್ಪಿಸಿದರು.
ಬಳಿಕ ರೋಹಿತ್‌ ಜೊತೆಗೂಡಿದ ಸೂರ್ಯಕುಮಾರ್‌ ಯಾದವ್‌ ಸ್ಫೋಟಕ ಆಟವನ್ನು ಮುಂದುವರಿಸಿದರು. ರೋಹಿತ್‌ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್‌ಗಳೊಂದಿಗೆ 48 ರನ್‌ಗಳಿಸಿ ಬೌಲ್ಟ್‌ ಓವರ್‌ನಲ್ಲಿ ರಚಿನ್‌ ರವೀಂದ್ರಗೆ ಕ್ಯಾಚ್‌ ನೀಡಿ ನಿರ್ಗಮಿಸಿದರು. ಸೂರ್ಯಕುಮಾರ್‌ 40 ಎಸೆತಗಳನ್ನು ಎದುರಿಸಿ 6 ಬೌಂಡರಿ, 3 ಸಿಕ್ಸರ್‌ ಸೇರಿ 62 ರನ್‌ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಶ್ರೇಯಸ್‌ ಅಯ್ಯರ್‌ 8 ಎಸೆತಗಳಲ್ಲಿ 5 ರನ್‌ಗಳಿಸಿ ಟೀಂ ಸೌಥಿಗೆ ವಿಕೆಟ್‌ ಒಪ್ಪಿಸಿದರು. ರಿಷಬ್‌ ಪಂತ್‌ 17 ಎಸೆತಗಳಿಂದ ಎರಡು ಬೌಂಡರಿ ಸೇರಿ 17 ರನ್‌ ಗಳಿಸಿದರು.
ಕಿವೀಸ್‌ ಪರ ಟ್ರೆಂಟ್‌ ಬೌಲ್ಟ್‌ 2 ವಿಕೆಟ್‌ ಪಡೆದರೆ ನಾಯಕ ಟಿಂ ಸೌಥಿ, ಸ್ಯಾಂಟ್ನರ್‌ ಹಾಗೂ ಡೇರಿಲ್ ಮಿಚೆಲ್‌ ತಲಾ 1 ವಿಕೆಟ್‌ ಪಡೆದರು

 

Read These Next

ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್

ಆಲ್‌ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ...

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...

ತಿಂಗಳಾಂತ್ಯದಲ್ಲಿ ಕೋವಿಡ್ ಮೊದಲ ಡೋಸ್ ಪೂರ್ಣಗೊಳಿಸಲು ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಸೂಚನೆ

ಮಂಗಳೂರು: ತಾಲೂಕಿನ ಉಳ್ಳಾಲ, ಕೋಟೆಕಾರು, ಸೋಮೇಶ್ವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇದೂವರೆಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆಯದೇ ...

ನಾರಾಯಣಗುರುಗಳ ಸ್ಥಬ್ಧಚಿತ್ರಕ್ಕೆ ಅವಕಾಶ ಕೋರಿ ದಕ ಜಿಲ್ಲಾ ಯುವ ಜೆಡಿಎಸ್‌ ವತಿಯಿಂದ ಪ್ರಧಾನಿಗೆ ಮನವಿ

ಮಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ...

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇಂದ್ರ ಸರಕಾರ ಅವಕಾಶ ...