ಶ್ರೀನಿವಾಸಪುರ: ಕೊರೊನಾ ವಾರಿಯರ್ಸ್ ಕಾರ್ಮಿಕರಿಗೆ ಪರಿಹಾರ ನೀಡಬೇಕು ಎಂದು ಆಗ್ರಹ

Source: Shabbir Ahmed | By S O News | Published on 8th May 2021, 2:23 PM | State News |

ಶ್ರೀನಿವಾಸಪುರ:  ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಈಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಅವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಇದರಿಂದ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಅವರ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಕೊರೊನಾ ಸಂಕಷ್ಟದ ನಡುವೆ ಕೊರೊನಾ ವಾರಿಯರ್ಸ್ ಸೇವೆಗೆ ಹೆಚ್ಚಿನ ಮಹತ್ವವಿದೆ. ಮನವಿ ಪತ್ರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸರ್ಕಾರದ ನಿಯಮಾನುಸಾರ ಪರಿಹಾರ ಕೊಡಿಸಲು ಪ್ರಾಮಾನಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
  ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ, ಸಿಇಒ ರಾಜೇಶ್ವರಿ, ಸ್ಥಳೀಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ನಾಗೇಶ್, ಸಂತೊಷ್, ಟಿ.ವಿ.ಸುರೇಶ್ ಬಾಬು, ಸುರೇಶ್, ಶ್ರೀನಾಥ್, ಬಾಬು ಪ್ರಮೋದ್ ಇದ್ದರು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...