ನಿಯಮಾನುಸಾರ ಘನತ್ಯಾಜ್ಯವನ್ನು ವಿಂಗಡಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ ನ್ಯಾ. ಸುಭಾಷ್ ಬಿ ಅಡಿ

Source: so news | Published on 8th September 2019, 11:56 PM | State News | Don't Miss |


ಹುಬ್ಬಳ್ಳಿ: ನಿಯಮಾನುಸಾರ ಘನತ್ಯಾಜ್ಯಗಳನ್ನು ವಿಂಗಡಿಸಿ ವಿಲೇವಾರಿ ಮಾಡಲು ಪಾಲಿಕೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ , ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಬಿ ಅಡಿ ಹೇಳಿದರು.
ನಗರದ ಸರ್ಕ್ಯೂಟ್ ಹೌಸಿನಲ್ಲಿ ಪ್ಲಾಸ್ಟಿಕ್ ನಿಷೇಧ, ಘನತ್ಯಾಜ್ಯ ವಿಲೇವಾರಿ, ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ , ಇ-ತ್ಯಾಜ್ಯ ,ನಿರ್ಮಾಣ ಮತ್ತು ನೆಲಸಮಗೊಳಿಸುವ ನಿಯಮಗಳ ಅನುಷ್ಠಾನ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ನಗರದಲ್ಲಿ ಮನೆಯಿಂದ ಕಸಗಳನ್ನು ಸಂಗ್ರಹಿಸುವಾ ವಿಂಗಡಿಸಿ ಪಡೆಯಬೇಕು. ಮನೆಗಳಿಂದ ಸ್ಯಾನಿಟರಿ ಪ್ಯಾಡ್, ಬ್ಯಾಂಡೇಜ್ ಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಸಾರ್ವಜನಿಕ ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ಕಳುಹಿಸಬೇಕು. ಪಾಲಿಕೆಯಿಂದ ಸಂಪೂರ್ಣಾವಾಗಿ ಪ್ಲಾಸ್ಟಿಕ್ ಚೀಲಗಳನ್ನು ನಿಷೇಧಿಸಬೇಕು. ಯಾವುದೇ ಗುಣಮಟ್ಟದ ಪ್ಲಾಸ್ಟಿಕ್ ಚೀಲಗಳು ಸಹ ಅವಕಾಶ ನೀಡಬಾರದು. ನಿರ್ಮಾಣ ಮತ್ತು ನೆಲಸಮಗೊಳಿಸುವ ಸಮಯದಲ್ಲಿ 20 ಟನ್ ಗಳಿಗೂ ಅಧಿಕ ತ್ಯಾಜ್ಯ ಉತ್ಪಾದಿಸುವವರು
ಘನತ್ಯಾಜ್ಯ ವಿಲೇವಾರಿ ಯೋಜನೆಯನ್ನು ನೀಡಿ ಪಾಲಿಕೆಯಿಂದ ಅನುಮತಿ ಪಡೆಯಬೇಕು. ರೈಲ್ವೇ ಸೇರಿದಂತೆ ಇತರೆ ಸರ್ಕಾರಿ ಸ್ವಾಮ್ಯದ ನಿರ್ಮಾಣ ಸಂಸ್ಥೆಗಳು, ಯೋಜನೆಗಳನ್ನು ಗುತ್ತಿಗೆ ನೀಡುವಾಗಲೇ ಘನತ್ಯಾಜ್ಯ ವಿಲೇವಾರಿಗೆ ನಿಯಮಗಳನ್ನು ರೂಪಿಸಿ ಅಳವಡಿಸಬೇಕು. ನಿರ್ಮಾಣ ಮತ್ತು ನೆಲಸಮಗೊಳಿಸುವ ಕಾರ್ಯದಲ್ಲಿ ಉಂಟಾಗುವ ಘನತ್ಯಾಜ್ಯಗಳನ್ನು ಸಂಪೂರ್ಣವಾಗಿ ಮರುಬಳಕೆ ಮಾಡಬೇಕು. ಸಿಮೆಂಟ್, ಕಬ್ಬಿಣ , ಕಟ್ಟಿಗೆ ಸೇರಿದಂತೆ ಎಲ್ಲಾ ವಸ್ತುಗಳ ಮರು ಬಳಕೆಗೆ ಆದ್ಯತೆ ನೀಡಬೇಕು. ಇಂತಹ ತ್ಯಾಜ್ಯಗಳನ್ನು ಸಾರ್ವಜನಿಕ ವಿಲೇವಾರಿ ಘಟಕಕ್ಕೆ ನೋಂದಾಯಿತ ವಾಹನಗಳಲ್ಲಿಯೇ ಸಾಗಿಸಬೇಕು ಎಂದರು.
ಅಕ್ಟೋಬರ್ ರಿಂದ ಸಂಪೂರ್ಣ ಪ್ಲಾಸ್ಟಿಕ್ ಬಳಕೆಗೆ ನಿಷೇಧ
ಸೆಪ್ಟೆಂಬರ್ ತಿಂಗಳಿನಿಂದಲೇ ಸಂಪೂರ್ಣ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳ ವರೆಗೆ ದಿನಾಂಕ ವಿಸ್ತರಿಸಿರುವುದರಿಂದ ಅನುಷ್ಠಾನದಲ್ಲಿ ಸಡಲಿತೆ ಮಾಡಲಾಗಿದೆ. ಆದರೂ ಬೆಂಗಳೂರು ನಗರದಲ್ಲಿ ಶೇ.80 ರಷ್ಟು ಮರುಬಳಕೆಗೆ ಬರದಂತಹ ಪ್ಲಾಸ್ಟಿಕ್ ಗಳನ್ನು ನಿಷೇಧಿಸಲಾಗಿದೆ. ಅಂತಹ ಪ್ಲಾಸ್ಟಿಕ್ ತಯಾರಕರು ಹಾಗೂ ಬಳಕೆದಾರರಿಗೂ ದಂಡ ವಿಧಿಸಲಾಗುತ್ತಿದೆ. ಸರ್ಕಾರದ ಕಚೇರಿ ಆವರಣಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ನಿರ್ಧರಿಸಲಾಗಿದೆ. ನೀರಿನ ಬಾಟೆಲ್ ಬಳಕೆಯನ್ನು ಸಹ ನಿಷೇಧಿಸಲಾಗುವುದು.
ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಒಡಂಬಡಿಕೆಯ
ದೊಡ್ಡ ಮಟ್ಟದ ಆಸ್ಪತ್ರೆಗಳಿಂದ ಹಿಡಿದು ಎಲ್ಲಾ ವೈದ್ಯಕೀಯ ಸಂಸ್ಥೆಗಳು ತಾರಿಹಾಳದಲ್ಲಿರುವ ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆಯ ಸೌಲಭ್ಯ ಒದಗಿಸುವ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಮಾಡಬೇಕು. ಮಲಿನ ನೀರು ಶುದ್ದೀಕರಣ ಘಟಕಗಳಿಂದ ಬರುವ ನೀರನ್ನು ಆಸ್ಪತ್ರೆಯ ಶುಚ್ಛಿತ್ವ ಕಾರ್ಯಗಳಿಗೆ ಬಳಸಬೇಕು ಎಂದರು.
ಕಿಮ್ಸ್ ಕಾರ್ಯ ಪ್ರಶಂಸೆ: 
ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಯಲ್ಲಿ ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಉತ್ತಮ ವಿಧಾನಗಳನ್ನು ಅನುಸರಿಸುತ್ತಿದೆ ಎಂದು ತೃಪ್ತಿ ವ್ಯಕ್ತಪಡಿಸಿದ ಸುಭಾಷ್ ಅಡಿ ಅವರು, ಕಿಮ್ಸ್ ಕಟ್ಟಡದ ದುರಸ್ತಿ ಮತ್ತು ಆವರಣದ ವಿಸ್ತರಣೆ ಅಗತ್ಯವಿದೆ ಎಂದರು. 
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ವಿಜಯಕುಮಾರ್ ಕಡಕ್ ಬಾವಿ, ಉಪ ಪರಿಸರ ಅಧಿಕಾರಿಗಳಾದ ಶೋಭಾ ಪೋಳ, ಸೋಮಶೇಖರಗೌಡ ಹಿರೇಗೌಡ್ರ, ಮಹಾನಗರಪಾಲಿಕೆಯ ಪರಿಸರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯಕುಮಾರ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಪರಮೇಶ್ವರ ನಾಯಕ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಂಗಮೇಶ ಕಲಹಾಳ ಸೇರಿದಂತೆ ರೇಲ್ವೇ,ಕಿಮ್ಸ್ ಮತ್ತಿತರ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...