ತಾಲೂಕುಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ. ಜನಸಂಖ್ಯೆ ಸ್ಥಿರತೆಗೆ ಕುಟುಂಬ ಕಲ್ಯಾಣ ಯೋಜನೆ ಅಳವಡಿಸಿಕೊಳ್ಳಿ: ಡಾ.ಲಿಂಗರಾಜು

Source: SO News | By Laxmi Tanaya | Published on 15th July 2023, 10:57 PM | State News | Don't Miss |

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ನಗರ ಆರೋಗ್ಯ ಕೇಂದ್ರ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 15ರಂದು ನಗರ ಆರೋಗ್ಯ ಕೇಂದ್ರದ ಆವರಣದಲ್ಲಿ ತಾಲೂಕು ಮಟ್ಟದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.  
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವದಲ್ಲಿ ಜನಸಂಖ್ಯೆಯು ಅತೀ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ಕಾರಣ ಅಜ್ಞಾನ, ಮೂಢನಂಬಿಕೆ, ಅನಕ್ಷರತೆ, ಬಾಲ್ಯವಿವಾಹ, ಜನಿಸುವ ಮಕ್ಕಳ ಮಧ್ಯೆ ಅಂತರವಿಲ್ಲದಿರುವುದು,
ಗಂಡುಮಗುಬೆಕೇಂಬ ಹಂಬಲವು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಜನಸಂಖ್ಯೆ ಸ್ಪೋಟದಿಂದಾಗಿ ದೇಶದ ಅಭಿವೃದ್ಧಿಯಿ ಕುಂಠಿತಗೊಳ್ಳುತ್ತಿದೆ‌ ಎಂದರು. ಕುಟುಂಬದಲ್ಲಿ ಸಂತೋಷ ಸಮೃದ್ಧಿ ಜೀವನ ನಡೆಸಲು ಕುಟುಂಬ ಯೋಜನೆಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಸರ್ಕಾರ ನಿಗದಿಪಡಿಸಿದ ವಯಸ್ಸಿಗೆ ಪಾಲಕರು ಮದುವೆ ಮಾಡಬೇಕು. ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿಸುಲು ಅವರಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು ಹೆಣ್ಣು ಮಕ್ಕಳನ್ನು ರಕ್ಷಿಸಬೇಕು. ಜನಸಂಖ್ಯೆ ಸ್ಥಿರತೆಗಾಗಿ ಜಾಗೃತಿ ಅತ್ಯವಶ್ಯಕವಾಗಿದ್ದು, ತಾತ್ಕಾಲಿಕ ಕುಟುಂಬ ಕಲ್ಯಾಣ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರನಾಥ್ ಎಂ.ಹೆಚ್ ಅವರು ಮಾತನಾಡಿ, ಪ್ರತಿ ವರ್ಷ ಜುಲೈ 11ರಂದು ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಉದ್ದೇಶ ಸಾರ್ವಜನಿಕರಿಗೆ ಜನಸಂಖ್ಯೆ ಸ್ಥಿರತೆ ಬಗ್ಗೆ ಅರಿವು ಮೂಡಿಸುವುದಾಗಿದೆ. ಚಿಕ್ಕ ಕುಟುಂಬ ಚೊಕ್ಕ ಕುಟುಂಬ ಎಂಬ ಗಾದೆ ಮಾತನ್ನು ಎಲ್ಲರೂ ಪಾಲಿಸಬೇಕು. ಅರ್ಹ ದಂಪತಿಯು ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಕನಿಷ್ಠ 03 ವರ್ಷ ಅಂತರ ಕಾಪಾಡಲು ಕುಟುಂಬ ಕಲ್ಯಾಣ ಕಾರ್ಯಕ್ರಮದ ತಾತ್ಕಾಲಿಕ ಹೊಸ ಹೊಸ ವಿಧಾನಗಳನ್ನು ಬಳಸಬೇಕು. ಮಕ್ಕಳು ಸಾಕು ಎಂದಮೇಲೆ ಉದರ ದರ್ಶಕ ಶಸ್ತ್ರಚಿಕಿತ್ಸೆಗೊಳಗಾಗಬೇಕು. ಇದರಿಂದ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿರಬಹುದು. ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು, ಸಂತೋಷ ಮತ್ತು ಸಮೃದ್ದಿ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆಂದು ಪ್ರತಿಜ್ಞೆಯನ್ನು ಈ ವೇಳೆ  ಮಾಡೋಣ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.

ತಾಲೂಕಾ ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ ಅವರು ಪ್ರಾಸ್ತಾವಿಕ ಮಾತನಾಡಿ, ಪ್ರಪಂಚದಲ್ಲಿ ಜನಸಂಖ್ಯೆ ಸ್ಪೋಟದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತವೆ. ಪ್ರಪಂಚದಲ್ಲಿಯೇ ಭಾರತ ಮೊದಲನೇ ಸ್ಥಾನ ಪಡೆದುಕೊಂಡಿದೆ. ಇದನ್ನು ನಿಯಂತ್ರಿಸಬೇಕಾದರೆ ಪ್ರತಿಯೊಬ್ಬರೂ ಕುಟುಂಬ ಕಲ್ಯಾಣ ಯೋಜನೆಯ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಾಲ್ಯವಿವಾಹ ತಡೆಗಟ್ಟುವುದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದು, ಮೂಢನಂಬಿಕೆಗಳಿಂದ ಹೊರಬರುವುದು, ಈ ನಿಯಮಗಳನ್ನು ಪಾಲಿಸಬೇಕು. ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸುರಕ್ಷಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರಗಳಲ್ಲಿ ಜನಸಂಖ್ಯೆ ನಿಯಂತ್ರಣದ ಸೂತ್ರದ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಪ್ರಕಾಶ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶಿಧರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಮೇಶ, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗೀತಾ, ಡಾ.ಮಹೇಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ, ಹಿ.ಆ.ಪ್ರಾ.ಸುರಕ್ಷಾಧಿಕಾರಿ ವಂದನಾ ಸೇರಿದಂತೆ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಕಿಮ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಕಚೇರಿಗಳ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗರ್ಭೀಣಿಯರು, ಬಾಣಂತಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...