ಆಂಧ್ರಪ್ರದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಚುನಾವಣೆ: ಟಿಡಿಪಿ, ವೈಎಸ್​ಆರ್​ ಪಕ್ಷಗಳ ಇಬ್ಬರು ಕಾರ್ಯಕರ್ತರ ಸಾವು

Source: so news | By Manju Naik | Published on 12th April 2019, 12:24 AM | National News |


ಅನಂತಪುರ: ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಮತದಾನ ಹಿಂಸಾಚಾರಕ್ಕೆ ತಿರುಗಿದ್ದು ಈ ಗಲಾಟೆಯಲ್ಲಿ ಟಿಡಿಪಿ ಕಾರ್ಯಕರ್ತ ಸಿದ್ಧ ಭಾಸ್ಕರ್​ ರೆಡ್ಡಿ ಹಾಗೂ ವೈಎಸ್​ಆರ್​ ಕಾರ್ಯಕರ್ತ ಪುಲ್ಲಾರೆಡ್ಡಿ ಮೃತಪಟ್ಟಿದ್ದಾರೆ.
ಅನಂತಪುರ ಜಿಲ್ಲೆಯ ತಾಡಪತ್ರಿ ಕ್ಷೇತ್ರದ ಮೀರಾಪುರಂನ ಮತಗಟ್ಟೆ 197ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಆಂಧ್ರಪ್ರದೇಶದಲ್ಲಿ ಮೊದಲು ಶಾಂತಿಯುತವಾಗಿಯೇ ಮತದಾನ ಪ್ರಾರಂಭವಾಯಿತು. ಅಧಿಕ ಸಂಖ್ಯೆಯಲ್ಲಿ ಮತದಾರರೂ ಮುಂಜಾನೆಯೇ ಆಗಮಿಸಿದರು. ಆದರೆ ಗುಂಟೂರು ಮತ್ತು ಚಿತ್ತೂರಿನಲ್ಲಿ ಮಾತ್ರ ವೈಎಸ್​ಆರ್​ ಹಾಗೂ ಟಿಡಿಪಿ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಬೆಳೆದು ಅದು ನಂತರ ಹಿಂಸಾಚಾರಕ್ಕೆ ತಿರುಗಿತು. ಇವಿಎಂಗಳೂ ನಾಶಗೊಂಡವು.
ಮೀರಾಪುರಂ ಗ್ರಾಮದ ಮತಗಟ್ಟೆಯ ಬಳಿ ಎರಡೂ ಪಕ್ಷಗಳ ಕಾರ್ಯಕರ್ತರ ವಾಗ್ವಾದ ತೀವ್ರಗೊಂಡು ಪರಸ್ಪರ ಕಲ್ಲು ತೂರಾಟ ನಡೆಸಿಕೊಂಡಿದ್ದಾರೆ

Read These Next

ಬ್ಯಾಂಕುಗಳ ವಿಲೀನ ಉನ್ಮಾದ

ವಾಸ್ತವಗಳು ಬ್ಯಾಂಕುಗಳ ಗಾತ್ರ ಮತ್ತು ದಕ್ಷತೆಯ ನಡುವಿನ ಸಂಬಂಧಗಳ ಒದಗಿಸುವ ತಿಳವಳಿಕೆಗಳಿಗೆ ಪೂರಕವಾಗಿಯೇನೂ ಇಲ್ಲ. ಉದಾಹರಣೆಗೆ ...