ಶಿಕ್ಷಕರು ವೃತ್ತಿಯ ಗೌರವ ಕಾಪಾಡಬೇಕು-ಸಿ.ಆರ್. ಅಶೋಕ್

Source: sonews | By Staff Correspondent | Published on 25th November 2020, 10:41 PM | State News |

ಕೋಲಾರ : ಶಿಕ್ಷಕರು ವೃತ್ತಿಯ ಗೌರವ ಕಾಪಾಡಬೇಕು ಶಾಲೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವ ಇಚ್ಛಾಶಕ್ತಿಯನ್ನು ಹೊಂದಿ, ಶಾಲೆಗಳ ಸಬಲೀಕರಣ ಗೊಳಿಸಬೇಕು  ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್ ಸಲಹೆ ಮಾಡಿದರು.ತಾಲೂಕಿನ ಕೆಂಬೋಡಿ ಜನತಾ ಪ್ರೌಢಶಾಲೆಯಲ್ಲಿ ಇಂದು ಹುತ್ತೂ ರು ಹೋಬಳಿ ಮುಖ್ಯೋಪಾಧ್ಯಾಯರು ಗಳ ಚಿಂತನ ಮಂಥನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸೇವೆಯಲ್ಲಿ ಶ್ರೇಷ್ಠ ಸೇವೆ ಎಂದು ಹೆಸರಾಗಿರುವ ಶಿಕ್ಷಣ ಇಲಾಖೆಯ ಶಿಕ್ಷಕ ವೃತ್ತಿಯ ಪಾವಿತ್ರತೆಯನ್ನು ಮೈಗೂಡಿಸಿಕೊಳ್ಳಬೇಕು ಹಾಗೆಯೇ ಕಾಲಕಾಲಕ್ಕೆ ಇಲಾಖೆ ನೀಡುವ ಹೊಸ ಹೊಸ ತರಬೇತಿಗಳನ್ನು ಪಡೆದು ಅನುಷ್ಠಾನಗೊಳಿಸಬೇಕು ಎಂದರು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿದಲ್ಲೂ ಗ್ರಾಮ ಶಿಕ್ಷಣ ಪಡೆ ರಚನೆ ಆಗಬೇಕು ಶೈಕ್ಷಣಿಕ ಪ್ರಗತಿಯತ್ತ ಚಿಂತನೆ ನಡೆಸುವ ಅಗತ್ಯವಿದೆ, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಸದಸ್ಯತ್ವ ಪಡೆದು, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಲು ಶಿಕ್ಷಕರು ನೆರವಾಗಬೇಕು ಎಂದರು.

ಪ್ರತಿಯೊಂದು ಶಾಲೆಯ ಆವರಣ ಮತ್ತು ಶೌಚಾಲಯಗಳಿಗೆ ನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲು ಜಲ್ ಜೀವನ್ ಮಿಷನ್ ಅಡಿಯಲ್ಲಿ ಅವಕಾಶವಿದ್ದು, ಜಿಲ್ಲೆಯ ಎಲ್ಲ ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮ ಅನುಷ್ಠಾನ, ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯತಿಯಲ್ಲೂ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಆಗಬೇಕು ಎಂದರು.

ಸಮಗ್ರ ಶಿಕ್ಷಣ ತಾಲೂಕು ಸಮನ್ವಯಾಧಿಕಾರಿ ಎಬಿ ರಾಮಕೃಷ್ಣ, ಶಿಕ್ಷಣ ಸಂಯೋಜಕರಾದ ಆರ್. ಶ್ರೀನಿವಾಸನ್, ಮುನಿರತ್ನಯ್ಯ ಶೆಟ್ಟಿ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ. ಶ್ರೀನಿವಾಸ್. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರಾಮಕೃಷ್ಣಪ್ಪ, ನಾರಾಯಣಸ್ವಾಮಿ,ಲಕ್ಷ್ಮೀ, ಕಾರ್ಯದರ್ಶಿ ಕರಿಬಸಪ್ಪ, ಕ್ಷೇತ್ರ ಸಂಪನ್ಮೂಲ, ಸಮೂಹ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. ಕೆಂಬೋಡಿ ಜನತಾ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಂ. ಎಸ್. ರವಿ ಸ್ವಾಗತಿಸಿ, ಅಶೋಕ್ ನಿರೂಪಿಸಿ, ರಾಜಣ್ಣ ವಂದಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...