ನಾಲ್ಕು ತಿಂಗಳಿಂದ ವೇತನವಿಲ್ಲದ ಶಿಕ್ಷಕರು ಕಂಗಾಲು; ಡಿಡಿಪಿಐ ಕಚೇರಿ ಮುಂದೆ ಧರಣಿ-ವೇತನ ಬಿಡುಗಡೆಗೆ ಆಗ್ರಹ

Source: sonews | By Staff Correspondent | Published on 17th August 2019, 10:00 PM | State News | Don't Miss |

ಕೋಲಾರ: ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರೌಢಶಾಲಾ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಬಂದಿಲ್ಲ,ಕುಟುಂಬ ನಿರ್ವಹಣೆಗೆ ಹೆಣಗಾಡುತ್ತಿರುವ ಪರಿಸ್ಥಿತಿ ತಲೆದೋರಿದ್ದು, ಕೂಡಲೇ ವೇತನ ಅನುದಾನ ಬಿಡುಗಡೆಗೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುಂದೆ ಶಿಕ್ಷಕರು ಧರಣಿ ನಡೆಸಿದರು.

ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಮುರಳಿಮೋಹನ್, ಧರಣಿ ನಿರತರನ್ನುದ್ದೇಶಿಸಿ ಮಾತನಾಡಿ, ವೇತನವನ್ನೇ ನಂಬಿರುವ ಶಿಕ್ಷಕರ ಬದುಕು ಸಂಕಷ್ಟದಲ್ಲಿದೆ, ಈ ಸಂಬಂಧ ಡಿಡಿಪಿಐ,ಬಿಇಒ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಕೋಲಾರ,ಶ್ರೀನಿವಾಸಪುರ ಸೇರಿದಂತೆ ಕೆಲವು ತಾಲ್ಲೂಕುಗಳಲ್ಲಿ ಶಿಕ್ಷಕರಿಗೆ ವೇತನವಾಗಿಲ್ಲ, ರಾಷ್ಟ್ರೀಯ ಮಾಧ್ಯಮ ಶಿಕ್ಷಣ ಅಭಿಯಾನದಡಿ ನೇಮಕಗೊಂಡ ಶಿಕ್ಷಕರಿಗೂ ವೇತನ ನೀಡದೇ ಇಲಾಖೆ ಅನ್ಯಾಯ ಎಸಗಿದೆ ಎಂದು ದೂರಿದರು.

ಶಾಲಾ ಅವಧಿಗೆ ಮುನ್ನಾ, ಅವಧಿಯ ನಂತರವೂ ಕೆಲಸ ಮಾಡುವ ಶಿಕ್ಷಕರು ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವಲ್ಲಿ ಅವಿಶ್ರಾಂತ ಶ್ರಮಿಸುತ್ತಿದ್ದಾರೆ, ಜಿಲ್ಲೆಗೆ 7ನೇ ಸ್ಥಾನ ತಂದುಕೊಟ್ಟು ಘನತೆ ಉಳಿಸಿದ ಶಿಕ್ಷಕರಿಗೆ ಕಳೆದ 4 ತಿಂಗಳಿಂದ ವೇತನ ನೀಡದೇ ಇರುವುದೇ ಸಾಧನೆಗೆ ನೀಡಿದ ಕೊಡುಗೆಯಾಗಿದೆ ಎಂದು ವ್ಯಂಗ್ಯವಾಡಿದರು.

ಮೇ ತಿಂಗಳಿಂದ ಸಂಬಳ ಬಟವಾಡೆಯಾಗದ ಕಾರಣ  ಶಿಕ್ಷಕರು ಜೀವನ ಮುನ್ನಡೆಸಲು ಸಂಕಷ್ಟ ಅನುಭವಿಸುವಂತಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸಹಶಿಕ್ಷಕರ ಸಂಘದ ಅಧ್ಯಕ್ಷ ಎನ್.ಎಲ್.ಶಂಕರಪ್ಪ, ಸರ್ಕಾರದ ಆದೇಶದಂತೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಶಿಕ್ಷಕರಿಗೆ ವೇತನ ಬಟವಾಡೆ ಮಾಡಬೇಕು, ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೂ ಬಾಕಿ ಇರುವ 4 ತಿಂಗಳ ವೇತನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಅನುದಾನ ಕೊರತೆಯಾಗುತ್ತಿದ್ದಂತೆ ಸರ್ಕಾರದೊಂದಿಗೆ ಮಾತನಾಡಿ ಬಿಡುಗಡೆ ಮಾಡಿಸುವಲ್ಲಿ ಇಲಾಖೆ ಎಡವಿದೆ, ಜಿಲ್ಲೆಯ ಹಲವು ತಾಲ್ಲೂಕುಗಳ ಶಿಕ್ಷಕರಿಗೂ ವೇತನ ಆಗಿದೆ, ಕೋಲಾರ ತಾಲ್ಲೂಕಿನ ಶಿಕ್ಷಕರು ಮತ್ತು ಜಿಲ್ಲೆಯ ಆರ್‍ಎಂಎಸ್‍ಎ ಅಡಿ ಕೆಲಸ ಮಾಡುವ ಶಿಕ್ಷಕರು ಏನು ತಪ್ಪು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ವೈದ್ಯಕೀಯ ವೆಚ್ಚಕ್ಕೆ ಸಂಬಂಧಿಸಿದಂತೆ ಬಿಇಒ ಕಚೇರಿಯಲ್ಲಿ ಬಾಕಿ ಇರುವ ಬಿಲ್ಲುಗಳನ್ನು ಕೂಡಲೇ ವಿಲೇವಾರಿ ಮಾಡಬೇಕು, ವರ್ಗಾವಣೆಯಲ್ಲಾಗಿರುವ ಗೊಂದಲಗಳನ್ನು ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಹಶಿಕ್ಷಕರ ಸಂಘದ ರಾಜ್ಯ ಸಹಕಾರ್ಯದರ್ಶಿ ದಾಸಪ್ಪ, ಜಿಲ್ಲಾ ಪದಾಧಿಕಾರಿಗಳಾದ  ಮೋಹಾನಾಚಾರಿ, ಶರಣಪ್ಪ, ರಾಧಾಮಣಿ, ಗಂಗಾಧರಮೂರ್ತಿ, ಪಿ.ಲೀಲಾ,ಜಿಲ್ಲಾ ಪ್ರೌಢಶಾಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್, ಪದಾಧಿಕಾರಿಗಳಾದ ಶ್ರೀರಾಮರೆಡ್ಡಿ, ಮುರಳಿ, ಸಹಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರುಗಳಾದ ಸುಬ್ರಮಣಿ, ನರಸಿಂಹಮೂರ್ತಿ, ಮುಕುಂದ ವೆಂಕಟೇಶಗೌಡ, ಶಿಕ್ಷಕರಾದ ವಿಜಯಲಕ್ಷ್ಮಿ ಪದ್ಮಾವತಿ, ನವನೀತಾ ಮತ್ತಿತರರು ಹಾಜರಿದ್ದರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...