ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ. ಆರ್ ಆ್ಯಂಡ್ ಡಿ ಹೊಸ ನೀತಿ ರೂಪಿಸಲು ಕಾರ್ಯಪಡೆ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 28th September 2021, 7:52 AM | State News | Don't Miss |

ಹುಬ್ಬಳ್ಳಿ : ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು. ಯುವಕರಲ್ಲಿ ವಿದ್ಯೆ,ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ , ಸರ್ಕಾರಗಳ ಜವಾಬ್ದಾರಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ, ಸಮಾಜಕ್ಕೆ  ಉತ್ತಮ ಮಾನವ ಸಂಪನ್ಮೂಲವಾಗಿ ಕೊಡುಗೆಗಳನ್ನು ಮರಳಿ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಕೆಎಲ್‌ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ವಿವಿಧ ಬಹು ಅಧ್ಯಯನ ಶಿಸ್ತುಗಳಲ್ಲಿ ಮಾದರಿಯಾಗಿ ರೂಪುಗೊಂಡಿದೆ. ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಆರ್ ಆ್ಯಂಡ್ ಡಿ ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅದಕ್ಕೆ ಹೆಚ್ಚು ಮಹತ್ವ ನೀಡಿ, ಕೈಗಾರಿಕೆ, ಕೃಷಿ, ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದೆ. ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ  ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ. ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‌ಇ ಟೆಕ್‌ಪಾರ್ಕಿನ ಅಭಿವೃದ್ಧಿಗೆ ಅಗತ್ಯವಾಗಿರುವ ಇನ್ನೂ 2 ಕೋಟಿ ರೂ.ಗಳನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಕ್ರೋಢೀಕರಿಸಿ ನೀಡಲಾಗುವುದು. ಸ್ಟಾರ್ಟ್ ಅಪ್‌ಗಳ ಉತ್ತೇಜನಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಫ
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಲ್‌ಇ ಟೆಕ್‌ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದ್ದು, ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶ ಪಡೆಯಲು ಮನಸ್ಸಾಗುತ್ತಿದೆ ಎಂದು ತಮಗೆ ವಿದ್ಯೆ ನೀಡಿದ ಸರಸ್ವತಿ ದೇಗುಲದ ಬಗ್ಗೆ ಮನದುಂಬಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮಗೆ ಕಲಿಸಿದ ಪ್ರಾಧ್ಯಾಪಕರು, ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು,ಪುಸ್ತಕ ಪಡೆಯದ ಗ್ರಂಥಾಲಯಗಳು,ಹಾಸ್ಟೇಲು,ಕ್ಯಾಂಪಸ್,ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು.

ಮುಖ್ಯಮಂತ್ರಿಯಾಗಿ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಗಳಲ್ಲಿ ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ. ಆಡಳಿತದಲ್ಲಿ ತಾಂತ್ರಿಕತೆ, ವೈಜ್ಞಾನಿಕತೆ ತರಲು ಉತ್ಸುಕನಾಗಿದ್ದೇನೆ. ಪ್ರತಿ ಹಂತದಲ್ಲಿಯೂ ನನ್ನ ಜ್ಞಾನವನ್ನು ಪ್ರಸ್ತುತ ಸಂಶೋಧನೆಗಳೊಂದಿಗೆ ತಾಳೆ ಮಾಡಿ ಪರೀಕ್ಷಿಸಿಕೊಳ್ಳುತ್ತಿರುತ್ತೇನೆ. ಸಾರ್ವಜನಿಕ ಉಪಯೋಗ, ಸಂಕೇತಗಳ ರವಾನೆಗೆ ವೈರ್‌ಲೆಸ್ ತಂತ್ರಜ್ಞಾನ, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಸಾಫ್ಟವೇರ್ ಕ್ಷೇತ್ರಗಳ ಅತ್ಯಾಧುನಿಕ ವಿದ್ಯೆ , ಸಂಶೋಧನೆಗಳಲ್ಲಿ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಮಹತ್ವದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ.ಡಿ.ಎಂ.ನಂಜುಂಡಪ್ಪ ಅವರ ಕಾಠಿಣ್ಯ,ಶಿಸ್ತು, ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು. ಉತ್ತಮ ಭೂತಕಾಲವಷ್ಟೇ ಅಲ್ಲ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಅಷ್ಟೇ ಮುಖ್ಯ. ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ. ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ. ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು‌. 

ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ.20 ರಷ್ಟು ಅವಕಾಶ ನೀಡಿದ್ದಾರೆ. ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.

ಬೃಹತ್ ,ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಮಾತನಾಡಿ, ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿಯವರೊಂದಿಗೆ ಹಂಚಿಕೊಳ್ಳುತ್ತಿರುವುದು, ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ. ಕೆಎಲ್‌ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು, ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.‌ 3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಬೇಕು . ಸರ್ಕಾರ ಅನೇಕ ಪ್ರೋತ್ಸಾಹಕ ಯೋಜನೆಗಳ ಪ್ರಯೋಜನ ಪಡೆಯಬೇಕು . ಅಕ್ಟೋಬರ್ 15 ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ. ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಮಾತನಾಡಿ,

ಇದೇ ಸಂದರ್ಭದಲ್ಲಿ ಕೆಎಲ್ಇ ಸಂಸ್ಥೆ ಹಾಗೂ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ,  ಸಂಸ್ಥೆಯ ಹಳೆಯ ವಿದ್ಯಾರ್ಥಿಗಳೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರನ್ನು ಸನ್ಮಾನಿಸಲಾಯಿತು.

ಕೈಮಗ್ಗ,ಜವಳಿ ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ್ ಪಾಟೀಲ ಮುನೇನಕೊಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.‌ ಕೆಎಲ್‌ಇ ತಾಂತ್ರಿಕ ವಿವಿ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಸ್ವಾಗತಿಸಿದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...