ಭಟ್ಕಳ: ಬಂಗಾರಪೇಟೆ ತಹಶೀಲ್ದಾರ್ ಹತ್ಯೆ ಖಂಡಿಸಿ ಮುಖ್ಯಮಂತ್ರಿ ಗಳಿಗೆ ಮನವಿ

Source: so news | Published on 11th July 2020, 12:10 AM | Coastal News | Don't Miss |

 

ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ಜಾರಿಗೆ ಆಗ್ರಹ

ಭಟ್ಕಳ: ಬಂಗಾರಪೇಟೆ ತಾಲೂಕಿನಲ್ಲಿ ಭೂಮಿ ಸರ್ವೆ ಕಾರ್ಯಕ್ಕೆ‌ ತೆರಳಿದ್ದ‌ ತಹಶೀಲ್ದಾರ್ ಚಂದ್ರಮೌಳೇಶ್ವರನ್ನು‌ ಗುರುವಾರ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಖಂಡಿಸಿ‌ ಶುಕ್ರವಾರ ತಹಶೀಲ್ದಾರರ ರವಿಚಂದ್ರನ್ ಭಟ್ಕಳರವರ ಮುಖಾಂತರ  ತಾಲ್ಲೂಕಿನ ಸರ್ಕಾರಿ ನೌಕರರ ಸಂಘಗ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.

ಬಂಗಾರಪೇಟೆ ತಾಲೂಕಿನ ಶಾಮಸಮುದ್ರ ಹೋಬಳಿ, ತೊಪ್ಪನಹಳ್ಳಿ ಗ್ರಾಮದ ರಾಮಮೂರ್ತಿ ಹಾಗೂ ವೆಂಕಟಪತಿ ಎಂಬುವವರ ಜಮೀನಿನ ವ್ಯಾಜ್ಯದ ಸಂಬಂಧ ಪೊಲೀಸ್ ರಕ್ಷಣೆಯಲ್ಲಿ ಜಂಟಿ ಸರ್ವೆ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಆರೋಪಿ ವಂಕಟಪತಿಯವರು ಪೊಲೀಸರ ಸಮ್ಮುಖದಲ್ಲಿ ಏಕಾಏಕಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಈ ಕೃತ್ಯವನ್ನು ಭಟ್ಕಳ ತಾಲೂಕಿನ ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ,
ಕಂದಾಯ, ಭೂಮಾಪನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಮೇಲೆ ಇಂತಹ ಹಲ್ಲೆ ಹಾಗೂ ದೌರ್ಜನ್ಯಗಳು ನಡೆಯುತ್ತಿದೆ.
ಮುಂದುವರೆದು ರಾಜ್ಯ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕಾರ್ಯಾಂಗ ಕ್ಷೇತ್ರ ಅಧಿಕಾರಿ/ನೌಕರರ ವರ್ಗ ಆತಂಕ ಹಾಗೂ ಭಯದಿಂದ ಕರ್ತವ್ಯ ನಿರ್ವಹಿಸುವ ವಾತಾವರಣ ಸೃಷ್ಟಿಯಾಗುತ್ತದೆ. ರಾಜ್ಯದಲ್ಲಿ ಕಠಿಣ ಕಾನೂನುಗಳು ಜಾರಿಯಲ್ಲಿದೆ ಕಾರಣ ಇಂತಹ ಕೃತ್ಯಗಳು ಮರುಕಳಿಸುತ್ತಿದ್ದು, ಇಂತಹ ಪರಿಸ್ಥಿತಿಗಳು ಮರುಕಳಿಸದಂತೆ ಕಠಿಣ ಕಾನೂನುಗಳನ್ನು ರಾಜ್ಯ ಸರ್ಕಾರ ರೂಪಿಸುವುದು ಅತ್ಯಂತ ಅವಶ್ಯಕವಾಗಿದೆ.
ರಾಜ್ಯ ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಾಣ ಮಾಡಲು ಅಗತ್ಯ
ರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು.
ಮೃತರ ಕುಟುಂಬಕ್ಕೆ ಸರ್ಕಾರದಿಂದ ಗರಿಷ್ಠ ಮಟ್ಟದ ಪರಿಹಾರವನ್ನು ನೀಡುವುದು.ಮೃತರ ಕುಟುಂಬದ ಸದಸ್ಯರೊಬ್ಬರು ಅನುಕಂಪದ ಆಧಾರದ ನೇಮಕಾತಿ ನೀಡುವುದು,ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾಗುವ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಶೀಘ್ರವಾಗಿ ಬಿಡುಗಡೆ ಎಂದು ಆಗ್ರಹಿಸಿದರು ‌ಈ ಸಂದರ್ಭದಲ್ಲಿ  ನೌಕರರ ಸಂ ಅಧ್ಯಕ್ಷ ಅನಂತ ಭಟ್ಕಳ, ಉಪಧ್ಯಕ್ಷ ಸುಧೀರ ಗಾಂವಕರ, ರಾಜ್ಯಪರಿಷತ್ ಸದಸ್ಯ ಪ್ರಕಾಶ ಶಿರಾಲಿ, ಕಾರ್ಯದರ್ಶೀ ಮೋಹನ ನಾಯ್ಕ, ಖಜಾಂಚಿ ವಿದ್ಯಾ ಹೆಗಡೆ, ಪ್ರವೀಣ ಪಿ, ಉದಯ ತಲ್ವಾರ ಇತರರು ಇದ್ದರು.

Read These Next