ಮಕ್ಕಳಿಗಾಗಿ ಟೆಲಿ ಕೌನ್ಸ್‍ಲಿಂಗ್ ಸೌಲಭ್ಯ 

Source: sonews | By Staff Correspondent | Published on 7th September 2020, 5:08 PM | Coastal News |

ಕಾರವಾರ: ನಿರ್ಲಕ್ಷತೆಗೊಳಗಾದ, ಪರಿತ್ಯಜಿಸಲ್ಪಟ್ಟ, ದೌಜನ್ಯ, ಶೋಷಣೆಗೊಳಗಾದ   ಮತ್ತು ಕುಟುಂಬದಿಂದ ಬೇರ್ಪಟ್ಟ, ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿಯನ್ನು ಉತ್ತಮ ಪಡಿಸುವ ಉದ್ದೇಶದಿಂದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಮಕ್ಕಳಿಗಾಗಿ ಟೆಲಿ ಕೌನ್ಸ್‍ಲಿಂಗ್ ಸೌಲಭ್ಯ   ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ  ಸೋನಲ್  ಐಗಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೆಲಿ ಕೌನ್ಸ್‍ಲಿಂಗ್ ಸೌಲಭ್ಯದಡಿಯಲ್ಲಿ  ಆಪ್ತ ಸಮಾಲೋಚನೆ ಬಯಸುವ ಜಿಲ್ಲೆಯ ಎಲ್ಲಾ ಮಕ್ಕಳು ಹಾಗೂ ಮಕ್ಕಳ ಪೋಷಕರು 14499 ಸಂಖ್ಯೆಗೆ ಕರೆ ಮಾಡುವ ಮೂಲಕ ಉಚಿತ ಆಪ್ತ ಸಮಾಲೋಚನೆ ಸೌಲಭ್ಯ  ಪಡೆಯಬಹುದಾಗಿರುತ್ತದೆ. ಆಪ್ತ ಸಮಾಲೋಚನೆಯ ಸೌಲಭ್ಯವು   ಬೆಳೆಗ್ಗೆ 8 ರಿಂದ ರಾತ್ರಿ 8 ರವರೆಗೆ ಇದ್ದು ಇದರ ಸದುಪಯೋಗವನ್ನು ಅಗತ್ಯವುಳ್ಳ ಮಕ್ಕಳು ಹಾಗೂ ಪೋಷಕರು ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...