ಕಾರವಾರ: ದೂರದೃಷ್ಟಿ ಯೋಜನೆ ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿರಲಿ- ತಾಪಂ: ಸಿಇಒ

Source: S O News service | By I.G. Bhatkali | Published on 13th October 2021, 12:47 AM | Coastal News |

ಕಾರವಾರ : ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳು ಸರಕಾರದ ಆದೇಶದಂತೆ ಮುಂದಿನ ಐದು ವರ್ಷಗಳ ದೂರದೃಷ್ಟಿ ಯೋಜನೆ ತಯಾರಿಸುವುದು ಅವಶ್ಯವಾಗಿದ್ದು, ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಸಹಭಾಗಿತ್ವದಲ್ಲಿ ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗುಂತೆ ಯೋಜನೆ ತಯಾರಿಸಬೇಕಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ   ಡಾ. ಆನಂದಕುಮಾರ  ಬಾಲಪ್ಪನವರ ಹೇಳಿದರು.

ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆಯ ಕುರಿತು ಗ್ರಾಮ ಪಂಚಾಯತಿ ಪಿಡಿಒ, ಅಧ್ಯಕ್ಷರು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಐದು ವರ್ಷಗಳಿಗಾಗಿ ದೂರದೃಷ್ಟಿ ಯೋಜನೆಯನ್ನು ರೂಪಿಸಿದೆ. ಪ್ರತೀ ಗ್ರಾಮಗಳ ಸವಾರ್ಂಗೀಣ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಪೂರಕವಾಗಿದ್ದು, ಯೋಜನೆಯನ್ನು ತಯಾರಿಸುವಾಗ ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸಿ. ಶಾಮಲಾ ಅವರು ಮಾತನಾಡಿ, ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ, ಶಿಕ್ಷಣ, ಆರೋಗ್ಯ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಳಿಗೆ ಹಾಗೂ ಜೀವನದ ಗುಣಮಟ್ಟ, ಕೃಷಿ ಚಟುವಟಿಕೆ, ವಿದ್ಯುಚ್ಛಕ್ತಿ ಲಭ್ಯತೆ, ವಾಸಿಸಲು ಯೋಗ್ಯವಾದ ಮನೆ, ಸೇರಿದಂತೆ ಮಾನವ ಅಭಿವೃದ್ಧಿಗೆ ಪೂರಕವಾದ ಅನೇಕ ಅಂಶಗಳನ್ನು ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳಾದ 17 ಅಂಶಗಳನ್ನು ಒಳಗೊಂಡಂತಹ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಮಾಹಿತಿ ನೀಡಿದರು.

ತರಬೇತಿ ಕಾರ್ಯಾಗಾರದಲ್ಲಿ ಸಹಾಯಕ ನಿರ್ದೇಶಕಿ (ನರೇಗಾ) ರೂಪಾಲಿ ಬಡಕುಂದ್ರಿ, ತಾಲೂಕು ಪಂಚಾಯತ್‍ನ ವ್ಯವಸ್ಥಾಪಕ ಸುದೀರ್ ಗಾಂವಕರ್, ತಾಲೂಕಾ ತಾಂತ್ರಿಕ ಸಂಯೋಜಕ ಅನಿಲ್,  ಟಿಎಂಐಎಸ್ ವಿನುತಾ, ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ, ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...